VISHWAROOPA NEWS BLOG

ಹರಿಹರ ನಾಮಮೃತ ಬರವಣಿಗೆ ಪತ್ರಿಕೆ ಬಿಡುಗಡೆ.

ಗಂಗಾವತಿ: ಇಲ್ಲಿನ ಶಂಕರ ಮಠದಲ್ಲಿ ಶ್ರೀ ದತ್ತಾತ್ರೇಯ ಜಯಂತೋತ್ಸವದ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಆಶಯದಂತೆ ಹರ ಮತ್ತು ಹರಿ ಒಂದೇ ಎಂಬ ದಿವ್ಯ ಸಂದೇಶವನ್ನು ಸಾರುವ ಉದ್ದೇಶದಿಂದ ಹಾಗೂ ಶ್ರೀಮತಸ್ಥರು ಒಂದಾಗುವುದರ ಮೂಲಕ ಸನಾತನ ಧರ್ಮದ ರಕ್ಷಣೆಗಾಗಿ ಹರಿ ನಾಮಾಮೃತ ಕೋಟಿ ಬರವಣಿಗೆ ಪತ್ರಿಕೆಯನ್ನು ಧರ್ಮದರ್ಶಿ ನಾರಾಯಣರಾವ್ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಯಾವುದೇ ಜಾತಿ ಮತ ಪಂಥವೆನಿಸದೆ…

Read More

ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ : ಆರ್. ಪುಟ್ಟಸ್ವಾಮಿ ತಿಳಿಸಿದರು

ಚಿತ್ರದುರ್ಗ: ಪಿಯುಸಿ ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಬದ್ದತೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ ತಿಳಿಸಿದರು. ಅವರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪಿಹೆಚ್‌ಡಿ ಸಹಿತ ಹತ್ತು ಹಲವು ಪದವಿ ಪಡೆದ ಉಪನ್ಯಾಸಕರು ಎಷ್ಟೇ ಬುದ್ದಿವಂತರಾಗಿದ್ದರೂ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ತಲುಪದೆ ಹೋದರೆ ತರಗತಿಗಳು ಯಶಸ್ವಿಯಾಗುವುದಿಲ್ಲ ಎಂದರು. ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ…

Read More

ಡಿಸೆಂಬರ್-೧೮ ಬುಧವಾರ ಹೊಸಕೇರಾ ಗ್ರಾಮದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ

ಗಂಗಾವತಿ: ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಮತ್ತು ಹಲ್ಲಿನ ಆಸ್ಪತ್ರೆ ಗಂಗಾವತಿ, ಇವರುಗಳ ಸಹಯೋಗದಲ್ಲಿ ಡಿಸೆಂಬರ್-೧೮ ಬುಧವಾರ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಹೊಸಕೇರಾ ಗ್ರಾಮದ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸಕೇರಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಸುನಿತಾ ಎಸ್. ಮತ್ತು ಸ್ವಾಮಿ ವಿವೇಕಾನಂದ ಸೇವಾ…

Read More

ಡಿಸೆಂಬರ್-೧೯ ಗುರುವಾರ ಮುಸ್ಟೂರು ಗ್ರಾಮದಲ್ಲಿ ಉಚಿತ ಆರೋಗ್ಯ, ನೇತ್ರ ತಪಾಸಣೆ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಕೆ.ಎಸ್. ಆಸ್ಪತ್ರೆ, ಕೊಪ್ಪಳ, ಲಯನ್ ಕಣ್ಣಿನ ಆಸ್ಪತ್ರೆ, ಕೊಪ್ಪಳ, ಐದೃಷ್ಟಿ ಕಣ್ಣಿನ ಆಸ್ಪತ್ರೆ, ಹೊಸಪೇಟೆ, ಶುಭಶ್ರೀ ಪಾರ್ಮಾಸ್ಯೂಟಿಕಲ್ಸ್, ಕನಕಗಿರಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ಜಿಲ್ಲಾ ಅಂಧತ್ವ ನಿವಾರಣಾ ಸಂಘ ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರು ಹಾಗೂ ಮುಸ್ಟೂರು ಗ್ರಾಮದ ಸಮಸ್ತ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ…

Read More

ಹೆಚ್.ಆರ್.ಎಸ್.ಎಂ. ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿ ನಿಧನ: ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ

ಗಂಗಾವತಿ: ನಗರದ ಹೆಚ್.ಆರ್.ಎಸ್.ಎಂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಲಿತಾ ಭಾವಿಕಟ್ಟಿಯವರು ಡಿಸೆಂಬರ್-೧೫ ರಂದು ವಿಧಿವಶರಾಗಿದ್ದು, ಇವರ ನಿಧನಕ್ಕೆ ಹಳೆ ವಿದ್ಯಾರ್ಥಿಗಳ ಸಂಘ ತೀವ್ರ ಸಂತಾಪ ಸೂಚಿಸುತ್ತದೆ ಎಂದು ಸಂಘದ ಅಧ್ಯಕ್ಷರಾದ ಎನ್.ಜಿ ಕಾರಟಗಿಯವರು ತಿಳಿಸಿದರು.ಅವರು ಬೆಳಗಾವಿ ಅಧಿವೇಶನದಲ್ಲಿದ್ದು, ಅಲ್ಲಿಂದಲೇ ದೂರವಾಣಿ ಕರೆ ಮೂಲಕ ಸಂತಾಪ ಸೂಚಿಸಿದ್ದಾರೆ.ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಹನುಮಂತಪ್ಪ ನಾಯಕ, ಕಾರ್ಯದರ್ಶಿಯಾದ ಎಸ್.ವಿ ಪಾಟೀಲ್ ಗುಂಡೂರು, ಸದಸ್ಯರುಗಳಾದ ಕನಕಮೂರ್ತಿ, ಹಾಷ್ಮುದ್ದೀನ ವಕೀಲರು, ಸೈಯ್ಯದ ಅಲಿ, ಗಿರೀಶ್ ಬಳ್ಳಾರಿ, ಹುಸೇನಪಾಷಾ, ಹೆಚ್.ಎಂ. ಪಾಟೀಲ್, ಪಿ. ದಶರಥ…

Read More

ಹನುಮದ್ ವೃತ ಪ್ರಯುಕ್ತ ತೊಟ್ಟಿಲು ಉತ್ಸವ.

ಗಂಗಾವತಿ. ನಗರದ ಶ್ರೀ ಯೋಗೀಶ್ವರ ಯಾಜ್ಞವಲ್ಕ್ಯ ಮಂದಿರದ ಶ್ರೀ ಆಂಜನೇಯ ಸ್ವಾಮಿಗೆ ಹನುಮದ್ ವೃತಾಚರಣೆಯ ಪ್ರಯುಕ್ತ ತೊಟ್ಟಿಲು ಉತ್ಸವ. ಶುಕ್ರವಾರದಂದು ಸಂಭ್ರಮದಿಂದ ಜರುಗಿತು.ಪ್ರದೀಪ್ ಆಚಾರ್ ಅವರು ಸಂಕಲ್ಪ ತೊಟ್ಟಿಲು ಉತ್ಸವ. ಅಷ್ಟಾವಧಾನ ಸೇವೆ ಇತರೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರಿವೇರಿಸಿದರು. ಬಳಿಕ ರಾತ್ರಿ ದೀಪೋತ್ಸವ, ಮಹಿಳೆಯರಿಂದ ಪುರುಷರಿಂದ ಭಜನೆ ಇತರೆ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಮುರಳಿಧರ್ ಕುಲಕರ್ಣಿ ಮಾತನಾಡಿ ಧಾರ್ಮಿಕ ಆಚರಣೆಯ ಮೂಲಕ ಸಮಾಜದ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಹಲವು ದಶಕಗಳಿಂದ ದೇವಸ್ಥಾನದಲ್ಲಿ…

Read More

೫ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ಕರಾಟೆ ವಿದ್ಯಾರ್ಥಿಗಳ ಅಮೋಘ ಸಾಧನೆ.

ಗಂಗಾವತಿ: ಡಿಸೆಂಬರ್-೧೪ ಶನಿವಾರ ನಡೆದ ೫ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಸಿಂಧನೂರಿನ ಮಿಲಪ್ ಶಾದಿಮಹಲ್‌ನಲ್ಲಿ ಡಾ. ರಜಾಕ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಈ ಒಂದು ಸ್ಪರ್ಧೆಯಲ್ಲಿ ಬಿ.ಎಲ್ ಬುಲ್ಸ್ ಕರಾಟೆ ಡು ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಗಂಗಾವತಿ ಸಂಸ್ಥೆ ವತಿಯಿಂದ ೨೦ ಕರಾಟೆ ಕ್ರೀಡಾಪಟುಗಳು ಭಾಗವಹಿಸಿ ಅಮೋಘವಾದ ಸಾಧನೆ ಮಾಡಿದಾರೆ.ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಚಿನ್ನು, ಭೀಮ್‌ಸಿಂಗ್, ನಿರ್ಮಲ, ಪ್ರತಾಪ್ ಪಡೆದಿದ್ದು, ಅದೇರೀತಿ, ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕುಮುಟೆ ವಿಭಾಗದಲ್ಲಿ ದ್ವಿತೀಯ…

Read More

೧೫ನೇ ವರ್ಷದ ಶ್ರೀ ದತ್ತಾತ್ರೇಯ ಜಯಂತೋತ್ಸವ ಗುರುದೋಷ ನಿವಾರಣೆಗೆ ದತ್ತ ನಾಮಸ್ಮರಣೆ ಅವಶ್ಯಕ: ಧರ್ಮದರ್ಶಿ ನಾರಾಯಣರಾವ್ ವೈದ್ಯ.

ಗಂಗಾವತಿ: ಹರ ಮುನಿದರು ಗುರು ಕಾಯುವ ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಮುಂದೆ ಗುರಿ ಹಿಂದೆ ಗುರುವಿನ ಅನುಗ್ರಹ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಗುರುದೋಷ ನಿವಾರಣೆಗೆ ತ್ರಿಮೂರ್ತಿ ಅವತಾರಿಗಳಾದ ಶ್ರೀ ದತ್ತಾತ್ರೇಯ ಗುರುಗಳ ನಾಮಸ್ಮರಣೆ ಅತ್ಯಂತ ಅವಶ್ಯಕವಾಗಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು.ಅವರು ಶಂಕರ ಮಠದ ಶಾರದಾ ದೇಗುಲದಲ್ಲಿ ಶೃಂಗೇರಿ ಜಗದ್ಗುರುಗಳ ಸುವರ್ಣ ಮಹೋತ್ಸವದ ಪ್ರಯುಕ್ತ ಉಭಯ ಜಗದ್ಗುರುಗಳ ಅನುಗ್ರಹದ ಮೇರೆಗೆ ೧೫ನೇ ವರ್ಷದ ದತ್ತಾತ್ರೇಯ ಜಯಂತೋತ್ಸವ ಉಪಯುಕ್ತ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು….

Read More

ನಿರ್ಮಲಾ ತುಂಗಭದ್ರಾ ಜನಜಾಗೃತಿ ಅಭಿಯಾನ

ಡಿ.13 ಶುಕ್ರವಾರರಂದು ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್ ಹಾಗೂ ಕಿಷ್ಕಿಂದ ಯುವ ಚಾರಣ ಬಳಗ ವತಿಯಿಂದ ನಿರ್ಮಲಾ ತುಂಗಭದ್ರಾ ಅಭಿಯಾನ ಕುರಿತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಣವಾಳದಲ್ಲಿ ಪ್ರಾರ್ಥನಾ ಸಮಯದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ, ಜಲಮೂಲ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ತ್ಯಾಜ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು . ಈ ಸಮಯದಲ್ಲಿ ಶಿಕ್ಷಕರಾದ ರತ್ನಾ ಕೊಟ್ರಶೆಟ್ಟಿ, ಮೇನಕಾ, ಶರಣಪ್ಪ, ಮೈಲಾರಪ್ಪ ಬೂದಿಹಾಳ ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.

Read More

ಸಂವಿಧಾನ ಎಲ್ಲಾ ಧರ್ಮಗ್ರಂಥಗಳಿಗಿಂತಲೂ ಮಿಗಿಲು : ಡಾ. ಶರಣಬಸಪ್ಪ ಕೋಲ್ಕಾರ.

ಪ್ರತಿ ಧರ್ಮಗಳಿಗೆ ಒಂದೊಂದು ಧರ್ಮಗ್ರಂಥಗಳಿವೆ. ಆಯಾ ಧರ್ಮಿಯರು ತಮ್ಮ ತಮ್ಮ ಧರ್ಮಗ್ರಂಥಗಳ ಸಂಹಿತೆಯನ್ವಯ ನಡೆಯಬೇಕೆಂಬ ಆಶಯವಿದೆ. ಧರ್ಮಗ್ರಂಥಗಳ ಮೌಲ್ಯಗಳು ಎಷ್ಟೇ ಶ್ರೇಷ್ಠವಾಗಿದ್ದರೂ ಅದು ಅನ್ಯಧರ್ಮಿಯರಿಗೆ ಗೌಣ ಆದರೆ ಸಂವಿಧಾನ ಮಾತ್ರ ಸಮಸ್ತ ಜನತೆಗೆ ಅನ್ವಯಿಸುವ ರಾಷ್ಟ್ರೀಯ ಧರ್ಮಗ್ರಂಥವಾಗಿ ಎಲ್ಲಾ ಧರ್ಮಗ್ರಂಥಗಳಿಗಿಂತಲೂ ಮಿಗಿಲಾಗಿದೆ. ಹಾಗಾಗಿ ಎಲ್ಲರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆಯಬೇಕು ಎಂದು ಪ್ರಾಚಾರ್ಯ, ಕನ್ನಡ ಪುಸ್ತಕ ಪ್ರಾದಿಕಾರದ ಸದಸ್ಯ ಡಾ. ಶರಣಬಸಪ್ಪ ಕೋಲ್ಕಾರ ಅಭಿಪ್ರಾಯಪಟ್ಟರು. ಅವರು ಗಂಗಾವತಿಯ ಕಲ್ಮಠ ಶ್ರೀ ಚನ್ನಬಸವಸ್ವಾಮಿ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ…

Read More