
ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ
ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ನಡೆಯಿತು. ಹಾಗೂ, ಆಶಾನಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಹಾಸನದ ಸಾಹಿತಿಗಳು, ನಾಟಕಕಾರರು ಶ್ರೀ ಗೊರೂರು ಅನಂತರಾಜುರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟರು…