
ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಬುಧವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ವಹಿಸಿದ್ದರು. ಮುಖ್ಯ ಗುರುಗಳಾದ ಜಗನ್ನಾಥದಾಸ್, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಗುರುಪಾದಯ್ಯ, ಲಯನ್ ಕಾಶಿ ವಿಶ್ವನಾಥ ಸಿರಿಗೇರಿ, ಲಯನ್ ರಾಮನಾಥ ಭಂಢಾರ್ಕರ್, ಲಯನ್ ಆಜಾದ್,…