
ಹಾಸ್ಯ ನಟ ಬಹುಮುಖ ಪ್ರತಿಭೆಯ ಮೈಸೂರು ರಮಾನಂದ್.
ಕರ್ನಾಟಕದ ರಂಗಭೂಮಿಯ ಪರಂಪರೆ ಕನ್ನಡಿಗರ ವಾಸ್ತವ ಬದುಕನ್ನು ಸಮರ್ಥವಾಗಿ ಪ್ರತಿನಿಧಿಸುತ್ತಲೇ ಬಂದಿದೆ. ಆಧ್ಯಾತ್ಮಿಕ, ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ವಿಡಂಬನೆ, ಸಮಕಾಲೀನ ಸಮಸ್ಯೆ….. ಹೀಗೆ ರಂಗಭೂಮಿಯಿಂದ ಆಗಿರುವ ಜೀವನಕ್ರಾಂತಿ ಬಹು ದೊಡ್ಡದು. ಜನಮಾನಸವನ್ನು ಈ ರೀತಿಯಾಗಿ ಸದಾ ಚಾಲನೆಯಲ್ಲಿ ಇರಿಸಿದ ದೃಷ್ಟಿಯಿಂದ ರಂಗಭೂಮಿಯನ್ನು ಜವಾಬ್ದಾರಿಯಿಂದ ಬೆಳಸಿದ ಮಹಾನ್ ಕಲಾವಿದರ ಪರಂಪರೆಗೆ ದೊಡ್ಡ ಗೌರವ ಸಲ್ಲಲೇಬೇಕಿದೆ. ಇಂತಹ ಮಹಾನ್ ರಂಗಕಲಾವಿದರಲ್ಲಿ ಸಮರ್ಪಣೆಯ ರಂಗ ಕಲಾವಿದ ಮೈಸೂರು ರಮಾನಂದ್ ಕೂಡ ಒಬ್ಬರು. ಸುಮಾರು 70 ವರ್ಷ ವಯಸ್ಸಿನ ಮೈಸೂರು ರಮಾನಂದ್ ಅವರು…