
ಸಂಸ್ಕಾರಗಳ ಅನುಕರಣೆ ಮಕ್ಕಳ ಶಿಕ್ಷಣದ ಭಾಗವಾಗಬೇಕು: ನಾಗರಾಜ ಗುತ್ತೇದಾರ
ಕೊಪ್ಪಳ: ಕೊಪ್ಪಳದ ಸೇವಾಭಾರತಿಯ ವಿದ್ಯಾವಿಕಾಸ ಪ್ರಕಲ್ಪದ ಮನೆಪಾಠ ಕೇಂದ್ರಗಳ ವಾರ್ಷಿಕೋತ್ಸವವು ಫೆಬ್ರವರಿ-೦೯ ರಂದು ಕೊಪ್ಪಳದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಅತ್ಯಂತ ಉತ್ಸಾಹದ ವಾತಾವರಣದಲ್ಲಿ ಜರುಗಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗಂಗಾವತಿಯ ಸಂಕಲ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಬಗ್ಗೆ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಪ್ಪಳದ ಶ್ರದ್ಧಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಮಧುಮತಿ ಪಟ್ಟಣಶೆಟ್ಟಿ ಅವರು ಸೇವಾಭಾರತಿಯ ಕಾರ್ಯವನ್ನು ಮೆಚ್ಚಿ ಮಾತನಾಡಿದರು….