ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಚುನಾವಣೆಗಳಲ್ಲಿ ಅರ್ಹರಿಗೆ ಮತ ಚಲಾಯಿಸಿ: ಸದಾನಂದ ನಾಗಪ್ಪ ನಾಯ್ಕ್ ಸಲಹೆ

ಗಂಗಾವತಿ : ಮತದಾರರು ಆಸೆ, ಆಮೀಷಕ್ಕೆ ಬಲಿಯಾಗದೇ ಮತ ಚಲಾಯಿಸಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು. ನಗರದ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ ಶ್ರೀ ರಾಮಭಟ್ ಜೋಶಿ ಸ್ಮಾರಕ ರಜತ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಮೀಷಗಳಿಗೆ ಬಲಿಯಾಗದೇ ಅಭಿವೃದ್ಧಿಗೆ…

Read More
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಗಂಗಾವತಿ: ವಿಶ್ವದಲ್ಲಿ ಬೃಹತ್ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶ ಅತ್ಯಂತ ಪವಿತ್ರವಾದ ಸಂವಿಧಾನವನ್ನು ಹೊಂದಿದ್ದು ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನದ ಉದ್ದಕ್ಕೂ ನಡೆಸಿಕೊಳ್ಳುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕೆಂದು ಸಮೀಪದ ಶ್ರೀರಾಮನಗರ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ ಹೇಳಿದರು. ಅವರು ರವಿವಾರದಂದು. 76ನೇ ಗಣರಾಜ್ಯೋತ್ಸವಕ್ಕೆ ಬಾತ್ ಬಾ ಗಾಂಧಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಸಮಾನತೆ ಸ್ವಾತಂತ್ರ್ಯತೆ ಬ್ರಾತೃತ್ವವನ್ನು ಭಾವನೆಯನ್ನು ಆಡಳಿತದ ವ್ಯವಸ್ಥೆಯಲ್ಲಿ…

Read More
SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್‌ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ

SPECTRUM-3 ಎನ್ನುವ ಶೀರ್ಷಿಕೆಯಡಿ ಅದ್ದೂರಿಯಾಗಿ ಜರುಗಿದ ಆರೋನ್ ಮೀರಜ್‌ಕರ್ ಹಾಗೂ ನಿವೇದಿಕತ ಹಿ.ಪ್ರಾ ಶಾಲೆಗಳ ಶಾಲಾ ವಾರ್ಷಿಕೋತ್ಸವ

ಗಂಗಾವತಿ: ಜನೇವರಿ-೨೪ ಶನಿವಾರದಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ, ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ SPECTRUM-3 ಎನ್ನುವ ಶೀರ್ಷಿಕೆಯಡಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀಮತಿ ಚಿನ್ನಮ್ಮ ಮಿರಜ್‌ಕರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಇ.ಸಿ.ಐ. ಚರ್ಚ್ನ ಬಿಷಪ್ ರವಿಕುಮಾರ್, ಅತಿಥಿಗಳಾಗಿ ಎಂ.ಎನ್.ಎಂ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಾಂತಪ್ಪ, ಯೇಸುದಾಸ್ ಫಾಸ್ಟರ್, ಸಂಸ್ಥೆಯ…

Read More
ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕುರಿತು ನಡೆದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ.

ಗಂಗಾವತಿ: ಜನವರಿ-೨೧ ಮಂಗಳವಾರದಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯ ಕುರಿತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಕುಮಾರಿ ನಿಕಿತಾ ಮೊದಲನೇ ಸ್ಥಾನವನ್ನು, ಅಲ್ವೇರ ದ್ವಿತೀಯ ಸ್ಥಾನವನ್ನು, ವೈಷ್ಣವಿ ತೃತೀಯ ಸ್ಥಾನವನ್ನು ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಮುಶಿರ ಪ್ರಥಮ ಸ್ಥಾನವನ್ನು ಪಡೆಯುವುದರ ಮುಖಾಂತರ ತಾಲೂಕಿನಲ್ಲಿ ಮಹಾನ್ ಶಾಲೆಯ ಕೀರ್ತಿಯನ್ನು ತಂದಿದ್ದಾರೆ. ಇಂದು ಮಂಥನ ಸಭಾಂಗಣದಲ್ಲಿ ನಡೆದ ಸಂಚಾರ ಮತ್ತು ಸುರಕ್ಷತಾ…

Read More
ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಜನತಾ ಸೇವಾ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ಜನತಾ ಸೇವಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ 1999ನೇ ಸಾಲಿನ ಹಳೆ ವಿದ್ಯಾರ್ಥಿಗಳ ತಂಡದವರು ಸ್ನೇಹ ಸಮ್ಮಿಲನ ಮತ್ತು ಗುರುವಂದನಾ  ಕಾರ್ಯಕ್ರಮ ನಡೆಸಿದರು. ಸುಮಾರು 60ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಜೀವನ ನಡೆಸಲು ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಪಿಸಿಕೊಂಡರು. 25 ವರ್ಷಗಳ ಹಿಂದೆ ಅಕ್ಷರ ಜ್ಞಾನ ಕಲಿಸಿದ 30ಕ್ಕೂ ಹೆಚ್ಚು ಶಿಕ್ಷಕರನ್ನು ಕರೆತಂದು ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳಾದ ವೆಂಕಟೇಶ್…

Read More
ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಜನವರಿ-೨೫ ರಿಂದ ೩೧ ರವರೆಗೆ ಗಂಗಾವತಿಯಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ

ಗಂಗಾವತಿ: ಕಿಷ್ಕಿಂಧಾ ಪ್ರತಿಷ್ಠಾನ ಗಂಗಾವತಿ, ವಿಪ್ರಸಿರಿ ಸೌಹಾರ್ದ ಸಹಕಾರ ಸಂಘ ನಿಯಮಿತ ಗಂಗಾವತಿ ಇವರಿಂದ ಜನವರಿ-೨೫ ರಿಂದ ೩೧ ರವರೆಗೆ ಸಂಜೆ ೬ ರಿಂದ ೮ ರವರೆಗೆ ನಗರದ ಕೋರ್ಟ್ ಮುಂಭಾಗದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಲ್ಲಿ ಮಹರ್ಷಿ ವಾಲ್ಮೀಕಿ ಶ್ರೀ ರಾಮಾಯಣ ಕಿಷ್ಕಿಂಧಾ ಕಾಂಡ ಪ್ರವಚನ ನಡೆಯಲಿದೆ ಎಂದು ಸಂಚಾಲಕರಾದ ಪವನಕುಮಾರ ಗುಂಡೂರು ಪ್ರಕಟಣೆಯಲ್ಲಿ ತಿಳಿಸಿದರು. ಈ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯನ್ನು ಕಜ್ಜಿಡೋಣಿ ಶಂಕರಾಚಾರ್ಯ ಅವಧೂತ ಆಶ್ರಮದ ವಿದ್ವಾನ್ ಶ್ರೀ ಕೃಷ್ಣಾನಂದ ಶರಣರು ಮಾಡಲಿದ್ದು, ಪ್ರವಚನವನ್ನು…

Read More
ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಭಾರತಿ ಮಹಾಸ್ವಾಮಿಗಳವರ ಪುರ ಪ್ರವೇಶ ಹಾಗೂ ಶ್ರದ್ಧೆ ಭಕ್ತಿಯಿಂದ ಜರುಗಿದ ಶೋಭಾಯಾತ್ರೆ

ಶೃಂಗೇರಿಯ ಕಿರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಭಾರತಿ ಮಹಾಸ್ವಾಮಿಗಳವರ ಪುರ ಪ್ರವೇಶ ಹಾಗೂ ಶ್ರದ್ಧೆ ಭಕ್ತಿಯಿಂದ ಜರುಗಿದ ಶೋಭಾಯಾತ್ರೆ

ಗಂಗಾವತಿ: ಶೃಂಗೇರಿಯ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಪ್ರಯುಕ್ತ ಕಿರಿಯ ಸ್ವಾಮೀಜಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳ ವಿಜಯ ಯಾತ್ರೆ ಪ್ರಯುಕ್ತ, ಪುರಪ್ರವೇಶ ಮಾಡುವುದರ ಮೂಲಕ ಸರ್ವ ಭಕ್ತಾದಿಗಳು ಸಕಲ ವಾದ್ಯ ವೈಭವದೊಂದಿಗೆ ವಿವಿಧ ಮಹಿಳಾ ಭಜನಾ ಮಂಡಳಿಯವರ ಸೊಗಸಾದ ಕೋಲಾಟ, ಭಜನೆ. ಋತಿಜ್ವರ, ವೇದ ಮಂತ್ರ ಘೋಷದೊಂದಿಗೆ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳುವುದರ ಮೂಲಕ ವಾಲ್ಮೀಕಿ ವೃತ್ತದಲ್ಲಿ ವೇದಮೂರ್ತಿ ಮಹೇಶ್ ಭಟ್ ತಂಡದವರಿಂದ ಮಹರ್ಷಿ ವಾಲ್ಮೀಕಿ ಅವರಿಗೆ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ…

Read More

ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆಯ ಫಲಿತಾಂಶ

ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್‌ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ ತು ಜೋರಾ, ಅಮತು ರೆಹಮಾನ್, ಸೋನುಶ್ರೀ ಎ.ಟಿ., ನಿರೀಕ್ಷಾ, ರೋಜಾ ಯು., ರಿತಿಕಾ ಐಲಿ ಮತ್ತು ಶಿವಾಂಶ್…

Read More
ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಸಮಾಜದಲ್ಲಿ ಅನಿಷ್ಟ ಮೂಡನಂಬಿಕೆಗಳ ವಿರುದ್ಧ ನಿಷ್ಠುರವಾಗಿ ವಚನಗಳನ್ನು ಬರೆದ ಏಕೈಕ ನಿಜಶರಣ ಚೌಡಯ್ಯ

ಗಂಗಾವತಿ: ನಗರದ ದುರ್ಗಮ್ಮ ದೇವಸ್ಥಾನದ ಹತ್ತಿರವಿರುವ ಶ್ರೀ ಅಂಬಿಗರ ಚೌಡಯ್ಯನವರ ವೃತ್ತದಲ್ಲಿ ಸಮಾಜ ಬಾಂಧವರೆಲ್ಲರೂ ಸೇರಿ ನಿಜಶರಣ ಚೌಡಯ್ಯ ಶರಣರ ಜಯಂತಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು. ಡಂಬದವೈರಿ ವೀರಗಣಾಚಾರಿ, ನಿಜದನಗಾರಿ, ಸಮಾಜದಲ್ಲಿ ಮೌಡ್ಯತೆಯ ವಿರುದ್ದ, ಅನಿಷ್ಠ ಪದ್ದತಿಗಳ ವಿರುದ್ದ, ಮೂಡನಂಬಿಕೆಗಳ ವಿರುದ್ಧ ನೇರವಾಗಿ ತಮ್ಮ ವಚನಾಮೃತದ ಮೂಲಕ ಸಮಾಜದ ಅಂಕುಡೊಂಕುಗಳನ್ನು ಕಠೋರವಾಗಿ ನಿಷ್ಠುರವಾಗಿ ತನ್ನ ಹೆಸರಿನಲ್ಲಿಯೇ ವಚನಗಳನ್ನು ಬರೆದ ಏಕೈಕ ನಿಜಶರಣ ಅಂದರೆ ಅದು ಅಂಬಿಗರ ಚೌಡಯ್ಯನವರು ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ…

Read More
ವಿಜಯನಗರ ವಿಜಯ ಮಹೋತ್ಸವ ವಿಶ್ವ ಶಾಂತಿ ಹೋಮ

ವಿಜಯನಗರ ವಿಜಯ ಮಹೋತ್ಸವ ವಿಶ್ವ ಶಾಂತಿ ಹೋಮ

ಗಂಗಾವತಿ: ಭಾರತ ಅಭ್ಯುತ್ತಾನ ಮಂಗಳ ಯಾತ್ರಾದ ಎಲ್ಲಾ ಸದಸ್ಯರಿಂದ ತಾಲೂಕಿನ ಆನೆಗುಂದಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಇದೇ ಕ್ರೋಧಿ ನಾಮ ಸಂವತ್ಸರದ ಪುಷ್ಯ ಮಾಸದ ಬುಧವಾರ ಅಂದರೆ ಜನವರಿ-೨೨ ಬುಧವಾರ ಬೆಳಿಗ್ಗೆ ೭ ರಿಂದ ಸಂಜೆ ೮ ರವರೆಗೆ ವಿಶ್ವ ಶಾಂತಿ ಹೋಮ ಹಾಗೂ ನರಸಿಂಹ ಹೋಮವನ್ನು ನೆರವೇರಿಸಲು ಗುರುಹಿರಿಯರ ಸಮ್ಮುಖದಲ್ಲಿ ನಿಶ್ಚಯಿಸಲಾಗಿದೆ. ಎಲ್ಲರೂ ಬಂಧು ಬಾಂಧವರೊಂದಿಗೆ ಮತ್ತು ಸ್ನೇಹಿತರೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನರಸಿಂಹ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಹಾಗೂ ವಿಶ್ವ ಶಾಂತಿ ಹೋಮದ ಮೂಲಕ…

Read More