
ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ
ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು. “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ತಂಡಗಳನ್ನು ರಚಿಸಲಾಗಿದೆ ಹಾಗೂ ಶಾಲಾ ಶಿಕ್ಷಕರನ್ನು ನಿರ್ಣಾಯಕರಾಗಿ ನೇಮಿಸಲಾಗಿದೆ.” ಎಂದು ಶಾಲಾ ಮುಖ್ಯೋಪಾಧ್ಯಾಯಿನಿ…