
ಸ್ವಚ್ಛ ಭಾರತ್ ಹಚ್ಚೆ ದಿನ್ – ಗೊರೂರು ಅನಂತರಾಜು, ಹಾಸನ.
ಹಾಸನದ ಹಾಸ್ಯ ಲೇಖಕಿ ಸುಮಾ ರಮೇಶ್ ತಮ್ಮ “ಹಚ್ಚೆ ದಿನ್” ಪುಸ್ತಕ ಕೊಟ್ಟು ತುಂಬಾ ದಿನಗಳೇ ಆಗಿದ್ದವು, ಯಾವಾಗ ಕೊಟ್ಟರೆಂಬುದೇ ಮರೆತು ಹೋಗಿತ್ತು. ಮೊನ್ನೆ ಬೆಂಗಳೂರಿಗೆ ಹೊರಟಾಗ, ನನ್ನ ಪುಸ್ತಕ ರಾಶಿಯಲ್ಲಿ ಆ ಪುಸ್ತಕವು ಬಿದ್ದಿತ್ತು. ಅನೇಕ ಪುಸ್ತಕಗಳನ್ನು ನನ್ನ ಮಡದಿ ಪೇಪರ್..ಪೇಪರ್.. ಎಂದು ಕೂಗಿ ಬರುವ ಮಂದಿಗೆ ಮಾರುತ್ತಿದ್ದಳು. ಅದರಿಂದ ಹಣ ತೆಗೆದು ಪಾತ್ರೆ ಮತ್ತು ಪ್ಲಾಸ್ಟಿಕ್ ಸಾಮಾನುಗಳನ್ನ ಖರೀದಿಸುತ್ತಿದ್ದಳು. ಅಲ್ಲಿ “ಹಚ್ಚೆ ದಿನ್” ಪುಸ್ತಕ ತೆಗೆದುಕೊಂಡು ಕೋಣನಕುಂಟೆ ಕ್ರಾಸ್ ತಲುಪಿದ ಆರು ಗಂಟೆ ಪಯಣದಲ್ಲಿ…