
ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ
ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ,…