ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.

ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು.

ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ ಮಹೇಶ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.

ಅದರಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಖೋ-ಖೋ ತಂಡವು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತರಾದ ಈ ತಂಡದ ವಿದ್ಯಾರ್ಥಿಗಳಿಗೆ ಹಿರೇಬೆಣಕಲ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾರೈಸಿದರು.

ಸರ್ವ ಸದಸ್ಯರು ಗ್ರಾಮದ ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು ಹಾಗೂ ನಾಗನಕಲ್ ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಅತ್ಯಂತ ಸಡಗರ ಸಂಭ್ರಮದಿದ ಅಭಿನಂದಿಸಿ, ಮುಂದಿನ ಕಲಬುರ್ಗಿ ವಿಭಾಗ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಲೆಂದು ತಂಡಕ್ಕೆ ಹಾರೈಸಿದರು.