ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ

ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ನಡೆಯಿತು.

ಹಾಗೂ, ಆಶಾನಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.

ಹಾಸನದ ಸಾಹಿತಿಗಳು, ನಾಟಕಕಾರರು ಶ್ರೀ ಗೊರೂರು ಅನಂತರಾಜುರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟರು ಶ್ರೀ ಮೈಸೂರು ರಮಾನಂದ್ ಅವರು ನೀಡಿ ಸನ್ಮಾನಿಸಿದರು.

ಸಾಹಿತ್ಯ ಕ್ಷೇತ್ರದಲ್ಲಿ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

ತಮ್ಮ ಕ್ರಿಯಾಶೀಲ ವ್ಯಕ್ತಿತ್ವದಿಂದ ರಂಗಭೂಮಿ ನಟರು, ಗಾಯಕರು, ನೃತ್ಯ ಚಿತ್ರ ಕಲಾವಿದರು ಪ್ರತಿಭ್ವಾನಿತ ಕಲಾವಿದರನ್ನು ಸಂದರ್ಶಿಸಿ ಪತ್ರಿಕೆಗಳ ಮೂಲಕ ಜನತೆಗೆ ಪರಿಚಯಿಸುವ ಸದಾ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ.

ಲೇಖಕರು ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ರಾಜ್ಯ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯ ಗೌರವ ಅಧ್ಯಕ್ಷರು ಶ್ರೀ ಗೊರೂರು ಅನಂತರಾಜು.

ಅವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸೇವೆ ಸಮಾಜಕ್ಕೆ ಇನ್ನೂ ಹೆಚ್ಚಿನದಾಗಿ ದೊರೆಯಲೆಂದು ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ರಾಜ್ಯಾಧ್ಯಕ್ಷರು ಶ್ರೀ ಮಧು ನಾಯ್ಕ್ ಲಂಬಾಣಿಯವರು ಅಭಿನಂದಿಸಿದ್ದಾರೆ.

ಮಹಾನ್ ಕಿಡ್ಸ್ ಶಾಲೆಯಲ್ಲಿ ಇಂಜಿನಿಯರ್ ದಿನಾಚರಣೆ.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದೇ ದಿನಾಚರಣೆಯ ಮೂಲ ಉದ್ದೇಶ… ನೇತ್ರಾಜ ಗುರುವಿನ ಮಠ.

ಗಂಗಾವತಿ: ಭಾರತ ರತ್ನ ಸಿವಿಲ್ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯನ್ನು ದೇಶಾದ್ಯಂತ ಸಪ್ಟೆಂಬರ್ 15ರಂದು ಆಚರಿಸಲಾಗುತ್ತಿದೆ.

ಇದರ ಮೂಲ ಉದ್ದೇಶ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಸಂಶೋಧನೆ ಬೆಳೆಸುವುದು ಎಂದು ಮಹಾನ್ ಕಿಡ್ಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ನೇತ್ರಾಜ ಗುರುವಿನ ಮಠ ಹೇಳಿದರು.

ಅವರು ಶಾಲೆಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ ಪ್ರಯುಕ್ತ ಸರ್ ಎಂ ವಿಶ್ವೇಶ್ವರಯ್ಯ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡುತ್ತಾ ಭಾರತವು ವೈಜ್ಞಾನಿಕ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ಇಡುವುದರ ಮೂಲಕ ಸಾಧನೆಯ ಹಾದಿಯಲ್ಲಿದೆ ಎಂಬುದಕ್ಕೆ ಇತ್ತೀಚಿನ ಉಡಾವಣೆಗಳು ಸಾಕ್ಷಿಯಾಗಿದೆ.

ಭೂಗೋಳ, ಖಗೋಳ, ಸೂರ್ಯ-ಚಂದ್ರ, ಹಗಲು-ರಾತ್ರಿ, ಗ್ರಹಣ ಮತ್ತಿತರ ವಿಷಯಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕಾರ್ಯ ನಡೆಸಲಾಗುತ್ತದೆ ಎಂದು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ನೇತ್ರಾಜ ಗುರುವಿನ ಮಠ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ ಗೊತ್ತಿದ್ದ ವಿಷಯದಿಂದ ಗೊತ್ತಿಲ್ಲದ ವಿಷಯಗಳ ಕಡೆಗೆ ಸಾಗುವುದೇ ದಿನಾಚರಣೆಯ ಮೂಲ ಉದ್ದೇಶ ಎಂದು ಹೇಳಿದರು.

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಮೂಲಕ ವಿಶ್ವದ ವಿಸ್ಮಯಗಳನ್ನು ಗುರುಗಳ ಮಾರ್ಗದರ್ಶನದಲ್ಲಿ ಕಳಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕ ಮಾದರಿಯ ವಸ್ತು ಪ್ರದರ್ಶನವನ್ನು ಪ್ರದರ್ಶಿಸಿದರು.. ಶಾಲಾ ಶಿಕ್ಷಕರಾದ ಚಂಪಾರಾಣಿ ಕು ಮುದಿನಿ ಸಹನಾ, ಪೂರ್ಣಿಮಾ, ಗೌಶಿಯ ಶಿಕ್ಷಕರು ಸೇರಿದಂತೆ ಪಾಲಕರುಗಳಾದ ಸುನಿಲ್ ವೈದ್ಯ, ವೆಂಕಟೇಶ, ಲತಾ, ಅಪಾರ ಪಾಲಕರು ಪಾಲ್ಗೊಂಡಿದ್ದರು.

ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಮರಳಿ ಗ್ರಾಮದ ಬೊಳೋಡಿ ಬಸವೇಶ್ವರ ಸಮುದಾಯ ಭವನದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಭೆಯಲ್ಲಿ ಪಾಲ್ಗೊಂಡ ಮುಖಂಡರಾದ ರಮೇಶ್ ಕುಲಕರ್ಣಿ ತಿಳಿಸಿದರು.

ಉಭಯ ಸಭೆಗಳಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಸಮತಿಯ ಪ್ರಮುಖರಾದ ಶ್ರೀ ಜಗನ್ನಾಥ ಅಲ್ಲಂಪಲ್ಲಿ, ಮಹಮ್ಮದ್ ರಫಿ, ಡಾ|| ಶಿವಕುಮಾರ್ ಮಾಲಿಪಾಟೀಲ್, ಅರ್ಜುನ್, ಶರಣಬಸವರಾಜ ರೆಡ್ಡಿ, ಯಮನೂರಪ್ಪ ನಾಯಕ್, ಧನಂಜಯ ಉಪ್ಪಾರ, ಗಾದಿಲಿಂಗಪ್ಪ, ವೆಂಕೋಬ ಮೇಲಕ್ರಿ, ನಿರುಪಾದೆಪ್ಪ, ಶರಣಪ್ಪ ಡಿ., ವಿರೇಶಪ್ಪ ಲಕೋಟಿ, ಯಮನೂರಪ್ಪ ನಾಯಕ, ಮನ್ಸೂರ್ ಬೆಗ್, ಮೌಲಾಹುಸೇನ್, ದ್ಯಾಮಣ್ಣ ಹಾಗೂ ಗ್ರಾಮದ ರೈತರು ಉಪಸ್ಥಿತರಿದ್ದರು.