ಬದುಕು ‘ಹಾವು-ಏಣಿಯಾಟ ಜಯಪ್ಪ ಹೊನ್ನಾಳಿ

ಬದುಕು ಹಾವು ಏಣಿಯಾಟ, ಅದರಲ್ಲಿ ದುರಾಸೆ, ದುಃಖ, ಜಾತಿ, ಮತ, ಕುಲ, ಧರ್ಮಗಳೆಂಬ ವಿಷಕಾರುವ ಹಾವುಗಳು ಜಾಸ್ತಿ, ‘ಬುದ್ಧ-ಬಸವ-ಅಂಬೇಡ್ಕರ್’ ಮುಂತಾದವರಿಲ್ಲಿ ಏಣಿಗಳು, ಆ ಏಣಿಗಳನ್ನು ಹಿಡಿದುಕೊಂಡು ನಾವು ಮೇಲೇರಬೇಕಾಗಿದೆ, ಅದರಲ್ಲೂ ಮುಖ್ಯವಾಗಿ ನಾವು ಅಂದರೆ ಬರೆವಣಿಗೆಯಲ್ಲಿ ತೊಡಗಿಸಿಕೊಂಡವರು, ಬರೆಯದ ಸಾವಿರಾರು ಜನರ ಪ್ರತಿನಿಧಿಗಳಾಗಿ, ಜಾತ್ಯತೀತರಾಗಿ ಜಗತ್ತಿಗೆ ಆದರ್ಶವಾಗಬೇಕಾಗಿದೆ, ತಾತೀತನಾಗದವನು, ಕುಲಾತೀತನಾಗದವನು ಎಂದಿಗೂ ಕವಿಯಾಗಲಾರ, ಮಮತೆ ಸಮತೆಗಳ ತನ್ನೆರಡೂ ಕಣ್ಣಾಗಿಸಿಕೊಂಡವ ಮಾತ್ರ ಕವಿಯಾಗಲು ಸಾಧ್ಯ, ರಾಜಕಾರಣಿಗಳ, ಮಂತ್ರಿ ಮಹೋದಯರ ಶಿಫಾರಸ್ಸಿನಿಂದ ಯಾರೇ ಕವಿಗೋಷ್ಠಿಯ ವೇದಿಕೆಗಳನ್ನೇರಿದರೂ, ಸಹೃದಯರೆದೆಯ ಸಿಂಹಾಸನವನ್ನೇರುವುದು ಅಸಾಧ್ಯ, ಕವಿತೆಯೇ ಕವಿಯನ್ನು ಶಿಫಾರಸ್ಸು ಮಾಡಿದರೆ ಮಾತ್ರ ಸಹೃದಯರೆದೆಯ ಸಿಂಹಾಸನನ್ನು ಪಂಪ-ಕುಮಾರವ್ಯಾಸ-ಕುವೆಂಪು-ಬೇಂದ್ರೆಯವರಂತೆ ಏರಬಹುದು, ಇದನ್ನು ಇಂದಿನ ಬಹುಪಾಲು ಬರೆಹಗಾರರು ಮರೆತಿರುವುದು ಖೇದಕರ ಸಂಗತಿ ಎಂದು ಕವಿ ಡಾ. ಜಯಪ್ಪ ಹೊನ್ನಾಳಿ ಹೇಳಿದರು.

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಮೈಸೂರು ಜಿಲ್ಲಾ ಘಟಕದಿಂದ ಹಾರ್ಡ್ವೀಕ್ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ದಸರಾ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತಾಡಿದ ಅವರು, ವಿಶ್ವಪ್ರಜ್ಞೆ ಕವಿಗಳದಾಗಬೇಕು, ಅವರು ಶಾಶ್ವತ ಸಾಂಸ್ಕೃತಿಕ ಶಾಸಕರು ತಾವೆಂಬುದನ್ನೆಂದಿಗೂ ಮರೆಯಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕವಯತ್ರಿ ಹೇಮಗಂಗಾ ಮಾತನಾಡಿ, ಭಾಷಾ ಶುದ್ಧಿ ಕವಿಗಳಿಗೆ ಬಹುಮುಖ್ಯ, ಭಾಷೆಯ ಮೇಲೆ ಪ್ರಭುತ್ವವಿಲ್ಲದಿರೆ ಉತ್ತಮ ಸಾಹಿತ್ಯ ಸೃಷ್ಟಿಸಲು ಸಾಧ್ಯವಿಲ್ಲ, ಪ್ರೌಢವಾದ ಭಾಷಾ ಸಂಪನ್ನತೆಯನ್ನು ಕವಿಗಳು ಎಲ್ಲಕ್ಕೂ ಮೊದಲು ತಮ್ಮದಾಗಿಸಿಕೊಳ್ಳಬೇಕು ಎಂದರು.

ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷೆ ಶ್ರೀಮತಿ ಇಂದಿರಾ ವಸಂತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮೀರಾ ಕೇಸರ್ಕರ್ ಎಲ್ಲರನ್ನೂ ಸ್ವಾಗತಿಸಿದರು, ಸ್ಮಿತಾ ಹೇಮೇಶ್ ಪ್ರಾರ್ಥನೆ ಹಾಗೂ ಕುಮಾರಿ ಪರಿಣಿತ ಹಚ್ಚೇವು ಕನ್ನಡದ ದೀಪ ದೀಪಾರತಿಯ ಅಮೋಘ ನೃತ್ಯ ದೊಂದಿಗೆ ಎಲ್ಲರನ್ನು ರಂಜಿಸಿ ಮೆಚ್ಚುಗೆಗೆ ಪಾತ್ರರಾದರು.

ಮುಖ್ಯ ಅತಿಥಿಗಳಾಗಿ ಎಂ ಶಿವಸ್ವಾಮಿ, ಶೈಲಜಾ ಹಾಸನ, ರಾಜೇಶ್ವರಿ ಹುಲ್ಲೇನಳ್ಳಿ, ರಾಘವೇಂದ್ರ, ಶಿವಕುಮಾರ್, ಬಿಡಿಎಂ ಕುಮಾರ್, ಹಿರಿಯ ಕವಿಗಳಾದ ಎನ್.ಎಲ್. ಚನ್ನೇಗೌಡ, ಗೊರೂರು ಅನಂತ ರಾಜು, ಶೀಲಾ ಭಟ್ ಇದ್ದು ಕವಿತೆ ವಾಚಿಸಿದರು. 20ಕ್ಕೂ ಹೆಚ್ಚು ಕವಿಗಳು ಕವನ ವಾಚಿಸಿದರು. ಪುಷ್ಪಲತಾ ನಾರಾಯಣ್, ಮಂಜುಳ ಜಾದವ್ ನಿರ್ವಹಿಸಿದರು.

ಮನೋಜ್ ಕುಮಾರ್, ಅನಿಲ್ ಕುಮಾರ್ ನಿರೂಪಿಸಿದರು. ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಾಸಂಗಿಕವಾಗಿ ಮಾತನಾಡುತ್ತ ವೇದಿಕೆಯ ಧ್ಯೇಯೋದ್ದೇಶಗಳನ್ನು ತಿಳಿಸಿ, ವೇದಿಕೆ ಮುನ್ನೆಡೆಸಲು ಸರ್ವರ ಸಹಕಾರ ಕೋರಿದರು ಮತ್ತು ಕಾರ್ಯಕ್ರಮದ ಕಡೆಯಲ್ಲಿ ವಂದನಾರ್ಪಣೆ ಮಾಡಿದರು.

ಕದಂಬ ಸೈನ್ಯ ಸಾಹಿತ್ಯ ಸಂಘಟನೆ ಮತ್ತು ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಕಿ ಶ್ರೀರಂಗಪಟ್ಟಣದಲ್ಲಿ

ಹಾಸನ: ಮಂಡ್ಯ ಜಿಲ್ಲೆ ಪ್ರಸಿದ್ಧ ಕದಂಬ ವಾಣಿ ಪತ್ರಿಕೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಸನ ಜಿಲ್ಲೆ ವತಿಯಿಂದ ಎಂಟು ಮಂದಿಗೆ ಕವಿಗೋಷ್ಠಿಗೆ ಅವಕಾಶ ಕಲ್ಪಿಸಲಾಗುವುದು. ಕವಿಗಳು ತಮ್ಮ ವಿವರ, ಹೆಸರು, ದೂರವಾಣಿ ಸಂಖ್ಯೆಯನ್ನು ಕದಂಬ ಸೈನ್ಯ ಕನ್ನಡ ಸಂಘಟನೆ ಹಾಸನ ಜಿಲ್ಲೆ ಗೌರವ ಅಧ್ಯಕ್ಷರು ಗೊರೂರು ‌ಅನಂತರಾಜುರವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅಕ್ಟೋಬರ್ ೧೫ನೇ ತಾರೀಖಿನ ಒಳಗೆ ಎಂದು ಮನವಿ ಮಾಡಲಾಗಿದೆ. ಗೊರೂರು ಅನಂತ ರಾಜು ರವರ ದೂರವಾಣಿ ಸಂಖ್ಯೆ ೯೪೪೯೪೬೨೮೭೯.

ಕಾರ್ಯಕ್ರಮವನ್ನು ಶ್ರೀ ಶ್ರೀ ಕ್ಷೇತ್ರ ಚಂದ್ರವನ ಶ್ರೀರಂಗಪಟ್ಟಣ ಪೂರ್ವ ವಾಹಿನಿ ಕಾವೇರಿ ನದಿ ತೀರದಲ್ಲಿ ಹಮ್ಮಿಕೊಳ್ಳಲಾಗಿದೆ. ಒಟ್ಟು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಜಿಲ್ಲೆಗಳ ಕವಿಗಳಿಗೆ ಆಹ್ವಾನ ನೀಡಲಾಗಿದೆ. ಮಧ್ನಾಹ ಊಟದ ವ್ಯವಸ್ಥೆ ಮಾಡಲಾಗಿದೆ, ಸಂಜೆ ಟೀ ವ್ಯವಸ್ಥೆ ಮಾಡಲಾಗಿದೆ.  ಭಾಗವಹಿಸಿದ ಕವಿಗಳಿಗೆ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಗವುದು. ಪ್ರಥಮ, ದ್ವಿತೀಯ, ತೃತೀಯ, ಇಬ್ಬರಿಗೆ ಸಮಾಧಾನ ಪ್ರಶಸ್ತಿ ನೀಡಿ ವೇದಿಕೆಯಲ್ಲಿ ಸನ್ಮಾನ ಮಾಡಲಾಗುವುದು.

 

ವಾಣಿಜ್ಯ ಸಂಕೀರಣ ಹಾಗೂ ಶ್ರೀ ವಾಸವಿ ಹೋಮ ಸಂಪನ್ನ.

ಗಂಗಾವತಿ: ನಗರದ ಆರ್ಯವೈಶ್ಯ ಸಮಾಜ ಬಾಂಧವರ ಶ್ರೀ ಕನ್ನಿಕಾ ಪರಮೇಶ್ವರಿ ಶರನ್ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಷ್ಟಮಿ ದಿನವಾದ ಮಂಗಳವಾರದಂದು ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಹಾಗೂ ಶ್ರೀ ವಾಸವಿ ಹೋಮ ಪೂರ್ಣಾಹುತಿ ಯೊಂದಿಗೆ ಮಂಗಳವಾರದಂದು ಸಂಪನ್ನಗೊಂಡಿತು.

ಬೆಳಿಗ್ಗೆ ಸಮಾಜದ ಅಧ್ಯಕ್ಷ ರೂಪ ರಾಣಿ ಲಕ್ಷ್ಮಣ್ ರಾಯಚೂರು ಅವರು ಪೂರ್ಣ ಕುಂಭದೊಂದಿಗೆ ಸಮಸ್ತ ಆರ್ಯವೈಶ್ಯ ಸಮಾಜ ಹಾಗೂ ಆರ್ಯವೈಶ್ಯ ಸಮಾಜ ಕಾರ್ಯ ಕಾರುಣಿ ಮಂಡಳಿಯ ಸದಸ್ಯರು. ಸಂಕೀರ್ಣದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

ಬಳಿಕ ಶ್ರೀ ನಗರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ವೇದಮೂರ್ತಿ ಪಂಡಿತ್ ಸುಬ್ರಹ್ಮಣ್ಯ ಹಾಗೂ ನಾಗರತ್ನ ಅವರು ವಾಸವಿ ಹೋಮದ ನೇತ್ರತ್ವವನ್ನು ವಹಿಸಿ ಅಧ್ಯಕ್ಷ ದಂಪತಿಗಳು ಸೇರಿದಂತೆ ಕಾರ್ಯದರ್ಶಿಗಳಾದ ಈಶ್ವರ ಶೆಟ್ಟಿ ದಂಪತಿಗಳು ಹಾಗೂ ಕಾರ್ಯಕಾರಣಿ ಸಮಿತಿಯ ದಂಪತಿಗಳಿಂದ ಪೂರ್ಣಾಹುತಿ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಕುಮಾರಿಕಾ ಪೂಜಾ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಉಪಾಧ್ಯಕ್ಷ ಸುರೇಶ್. ಶೆಟ್ಟಿ. ಭಾಗ್ಯ ಈಶ್ವರ ಶೆಟ್ಟಿ. ಪ್ರಸಾದ ಪಾನ ಗಂಟೆ. ಮಂಜುನಾಥ್, ಮಾರುತಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು