ನವೆಂಬರ್-೮ ರಂದು ಗಂಗಾವತಿಯಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ಗಂಗಾವತಿ: ನಗರದ ಶ್ರೀ ಮಾತಾ ಕರೋಕೆ ಸ್ಟುಡಿಯೋ ಹಾಗೂ ಸಪ್ತಸ್ವರ ಸಾಂಸ್ಕೃತಿಕ ಕಲಾ ಬಳಗ ಇವರಿಂದ ನವೆಂಬರ್-೮ ಶನಿವಾರ ಸಂಜೆ ೫:೩೦ಕ್ಕೆ ಗಂಗಾವತಿಯ ಕೋರ್ಟ್ ಮುಂಭಾಗದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ನಗರಸಭೆ ಸದಸ್ಯರಾದ ಆರ್. ಕಣ್ಣನ್ ಪ್ರಕಟಣೆಯಲ್ಲಿ ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯೋಧ್ಯಮಿಗಳಾದ ಶಿವಪ್ಪ ಗಾಳಿ ವಹಿಸಲಿದ್ದು, ಡಿ.ವೈ.ಎಸ್.ಪಿ ಆದ ಜಯಪ್ಪ ಎಸ್. ನ್ಯಾಮಗೌಡ್ರು ಜ್ಯೋತಿ ಬೆಳಗಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಪೌರಾಯುಕ್ತರು, ನಗರಸಭೆ ಸದಸ್ಯರುಗಳು, ಗುತ್ತಿಗೆದಾರರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸಂಗೀತಾಸಕ್ತರು, ಪತ್ರಿಕಾ ಹಾಗೂ ದೃಶ್ಯ ಮಾಧ್ಯಮಗಳ ಪತ್ರಕರ್ತರು, ವರದಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ. https://aratt.ai/@vishwaroopa_news_blog

 

ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪನೆಗಾಗಿ ನವೆಂಬರ್-೮ ರಂದು ಪೂರ್ವಸಿದ್ಧತಾ ಸಭೆ.

ಗಂಗಾವತಿ: ಪ್ರಸ್ತುತ ಈ ವರ್ಷ ನಡೆದ ಹಾನಗಲ್ಲ ಶ್ರೀ ಕುಮಾರೇಶ್ವರರ ೧೫೮ನೇ ಜಯಂತ್ಯೋತ್ಸವದ ಪ್ರಯುಕ್ತವಾಗಿ ಗಂಗಾವತಿ ನಗರದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರ ಭಜನಾ ಮಂಡಳಿ ಸ್ಥಾಪಿಸಬೇಕೆಂದು ಇಚ್ಛೆಯನ್ನು ಹೊಂದಿ, ನವೆಂಬರ್-೮ ಶನಿವಾರ, ಸಂಜೆ ೦೪:೦೦ ಗಂಟೆಗೆ ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಶ್ರೀ ಕೊಟ್ಟೂರೇಶ್ವರ ಸಿಟಿ ಸ್ಕ್ಯಾನಿಂಗ್ ಸೆಂಟರ್ ಹತ್ತಿರದ ಕನ್ನಡ ಜಾಗೃತಿ ಭವನದಲ್ಲಿ ಭಜನಾ ಮಂಡಳಿಯ ಪೂರ್ವ ಸಿದ್ಧತಾ ಸಭೆಯನ್ನು ಕರೆಯಲಾಗಿದೆ ಎಂದು ಶ್ರೀ ಹಾನಗಲ್ಲ ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶರಣಬಸವ ದೇವರು ಪ್ರಕಟಣೆಯಲ್ಲಿ ತಿಳಿಸಿದರು.

ಈ ಪೂರ್ವಸಿದ್ಧತಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಶರಣ ಬಂಧುಗಳು ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ ಅವರು ಪ್ರಸ್ತುತ ವರ್ಷದ ಶ್ರೀ ಹಾನಗಲ್ಲ ಕುಮಾರೇಶ್ವರರ ಜಯಂತಿ ಆಚರಣೆಯನ್ನು ಯಶಸ್ವಿಗೊಳಿಸಿದ ಎಲ್ಲ ಸದ್ಭಕ್ತರಿಗೆ ಧನ್ಯವಾದಗಳನ್ನು ತಿಳಿಸುವುದರ ಮುಖಾಂತರವಾಗಿ ಮುಂಬರುವ ದಿನಗಳಲ್ಲಿ ನಿರಂತರವಾಗಿ ಎಲ್ಲಾ ಶರಣರನ್ನು ಆಧ್ಯಾತ್ಮಿಕವಾಗಿ ಮುನ್ನಡೆಸುವ ಸಲುವಾಗಿ ಗಂಗಾವತಿ ನಗರದಲ್ಲಿ ಶ್ರೀ ಹಾನಗಲ್ಲ ಕುಮಾರೇಶ್ವರರ ಭಜನಾ ಮಂಡಳಿ ಸ್ಥಾಪನೆಗಾಗಿ ಸಹಕರಿಸಲು  ತಿಳಿಸಿದ್ದಾರೆ.https://aratt.ai/@vishwaroopa_news_blog

ನವೆಂಬರ್-೦೯ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕೊಪ್ಪಳ ಜಿಲ್ಲಾ ೧೧ನೇಯ ಚುಟುಕು ಸಾಹಿತ್ಯ ಸಮ್ಮೇಳನ

ಗಂಗಾವತಿ: ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನವಂಬರ್-೯ ಭಾನುವಾರದಂದು ಹಿರಿಯ ಸಾಹಿತಿಗಳಾದ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ೧೧ನೇ ಚುಟುಕು ಸಾಹಿತ್ಯ ಸಮ್ಮೇಳನ ಜರುಗಲಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿ ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಮ್ಮೇಳನವು ಸದರಿ ದಿನದಂದು ಬೆಳಗ್ಗೆ ೧೦ ರಿಂದ ರಾತ್ರಿ ೧೦ ರವರೆಗೆ ಜರುಗಲಿದ್ದು, ಇದರ ದಿವ್ಯಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಕುಕನೂರು ಶಾಖಾಮಠದ ಡಾ. ಮಹಾದೇವ ಮಹಾಸ್ವಾಮಿಗಳು, ಗಜೇಂದ್ರಗಡ ಕಾಲಜ್ಞಾನಮಠದ ಶ್ರೀ ಶರಣಬಸವೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿಯವರು ಮಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಂ.ಜಿ.ಆರ್. ಅರಸ್ ವಹಿಸಲಿದ್ದಾರೆ.

ಈ ಸಮ್ಮೇಳನದ ಗೋಷ್ಠಿ-೧ ರಲ್ಲಿ ಚುಟುಕು ಸಾಹಿತ್ಯ ವೈಶಿಷ್ಟ್ಯತೆ ಮತ್ತು ಅವಲೋಕನ ಮತ್ತು ಗೋಷ್ಠಿ-೨ ರಲ್ಲಿ ಕೊಪ್ಪಳ ಜಿಲ್ಲೆಯ ಅಭಿವೃದ್ಧಿ ಸವಾಲುಗಳು : ಒಂದು ಚಿಂತನೆ ಕುರಿತು ಉಪನ್ಯಾಸ ನಡೆಯಲಿದೆ.

ಈ ಸಮ್ಮೇಳನದ ಆಯೋಜನೆಯನ್ನು ಕೊಪ್ಪಳ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ ಹಾಗೂ ಕಾರ್ಯಕಾರಿ ಮಂಡಳಿಯವರು ಮಾಡಿದ್ದು, ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಕವಿಗಳು ಹಾಗೂ ಕವಯಿತ್ರಿಗಳು ಪಾಲ್ಗೊಳ್ಳಲಿದ್ದು, ಕವಿಗೋಷ್ಠಿಗಳು, ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಚುಟುಕು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ವೀರಣ್ಣ ವಾಲಿಯವರು ಮೂಲತಃ ಯಲಬುರ್ಗಾ ತಾಲೂಕಿನ ಕರಮುಡಿಯವರು. ಇವರು “ಆಶಾಡ ವಿಭೂತಿಗಳು”. “ಮೌನ ನಿನಾದ”. “ನಮ್ಮ ನೆಲ ನಮ್ಮ ಜನ”. “ಲೇಖನ ಮಾಲೆ” ಸೇರಿದಂತೆ ಅನೇಕ ಕೃತಿಗಳನ್ನು ಸಾಹಿತ್ಯ ಚಂಪಾದಿತ ಚುಟುಕುಗಳನ್ನು ಪ್ರಕಟಿಸಿದ್ದು, ಹಲವಾರು ಲೇಖನಗಳನ್ನು ಪತ್ರಿಕೆಗಳಿಗೆ ಬರೆಯುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಈ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಾಹಿತ್ಯಾಸಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಗಂಗಾವತಿ ಚುಟುಕು ಸಾಹಿತ್ಯ ಪರಿಷತ್ತು ಕೋರಿದೆ ಎಂದು ತಿಳಿಸಿದರು. https://aratt.ai/@vishwaroopa_news_blog

ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ

ಗಂಗಾವತಿ: ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಮಂಗಳವಾರದಂದು ೧೩ ವರ್ಷದ ಒಳಗಿನ ಮಕ್ಕಳಿಗಾಗಿ ಪೀಸ್ ಪೋಸ್ಟರ್ ಕಾಂಪಿಟೇಶನ್ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಜಜಾ ಹುಸ್ನಾ ಹಾಗೂ ಕುಶ್ ರಾಜ್ ಪುರೋಹಿತ್ ಪ್ರಥಮ ಸ್ಥಾನ ಪಡೆದುಕೊಂಡರು. ಚಿತ್ರಕಲೆಯಲ್ಲಿ ಪಾಲ್ಗೊಂಡ ಮುದ್ದು ಮಕ್ಕಳು ಟುಗೆದರ್ ವನ್ ವಿಷಯ ಕುರಿತು ತಮ್ಮದೇ ಆದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ ಬಾಲ್ಯದಲ್ಲಿ ಮಕ್ಕಳಿಗೆ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಾಕಷ್ಟು ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಸ್ಪರ್ಧೆಗೆ ಸಹಕರಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿಗಳಾದ ಜಂಬಣ್ಣ ಐಲಿ, ಖಜಾಂಚಿಗಳಾದ ಶಿವಪ್ಪ ಗಾಳಿ ಹಾಗೂ ಸ್ಪರ್ಧೆಯ ನಿರ್ಣಾಯಕರಾಗಿ ಖ್ಯಾತ ಚಿತ್ರ ಕಲಾವಿದ ಹಾಗೂ ನಿವೃತ್ತ ಶಿಕ್ಷಕ ರಾಘವೇಂದ್ರ ಪುರೋಹಿತ್, ಹಿರಿಯ ವೈದ್ಯರಾದ ಡಾ|| ಜಿ. ಚಂದ್ರಪ್ಪ,. ಡಾ|| ಪಂಪಾಪತಿ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.https://aratt.ai/@vishwaroopa_news_blog