ದ್ವಿತೀಯ ಪಿ.ಯು.ಸಿ ಫಲಿತಾಂಶದಲ್ಲಿ ಕೊಟ್ಟೂರೇಶ್ವರ ಸಂಯುಕ್ತ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಗಂಗಾವತಿ: ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಶ್ರೀ ಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು, ಪಂಪಾನಗರ ಗಂಗಾವತಿ ಸದರಿ ವಿದ್ಯಾಲಯದ ೨೦೨೬ ರ ಪಿ.ಯು.ಸಿ ದ್ವಿತೀಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇಕಡಾವಾರು ೮೯.೪೭ ಇರುತ್ತದೆ. ೧೨ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೫೬ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ೩೧ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ೦೧ ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿ ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.

ಕಲಾ ವಿಭಾಗದಲ್ಲಿ ಸುನೀತಾ ನೇಮಪ್ಪ ೫೬೭ ಅಂಕ, ರೇಖಾ ಯಮನೂರಪ್ಪ ೫೬೦, ಅನೀಲಕುಮಾರ ೫೪೯ ಅಂಕಗಳನ್ನು ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ ರಾಹುಲ್ ಜಾಧವ ೫೮೧, ಸೋಮೇಶ ರಮೇಶ ೫೭೯, ನಿಖಿತಾ ಚವ್ಹಾಣ ೫೩೮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಸಂಸ್ಥೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು, ಕಾರ್ಯದರ್ಶಿಗಳಾದ ಶರಣೇಗೌಡ ಮಾಲಿಪಾಟೀಲ್ ಮತ್ತು ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.  https://aratt.ai/@vishwaroopa_news_blog

ಕೊಪ್ಪಳ ತಾಲೂಕು 2ನೇ ಸಮ್ಮೇಳನಾಧ್ಯಕ್ಷರಾಗಿ ಶ್ರೀನಿವಾಸ ಚಿತ್ರಗಾರ ಆಯ್ಕೆ: ಗುಡಿಕೋಟಿ

ಗಂಗಾವತಿ: ಕೊಪ್ಪಳ ತಾಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನವು ಬರುವ ಮೇ ತಿಂಗಳ ಕೊನೆವಾರದಲ್ಲಿ ಕೊಪ್ಪಳ ನಗರ ಅಥವಾ ಗ್ರಾಮೀಣ ಭಾಗದಲ್ಲಿ ನಡೆಸಲು ತೀರ್ಮಾನಿಸಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಶಿಕ್ಷಕರು ಹಾಗೂ ಕವಿಗಳಾದ ಶ್ರೀನಿವಾಸ ಚಿತ್ರಗಾರ ಅವರನ್ನು ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿ ಹೇಳಿದರು.

ಈ ಪೂರ್ವಭಾವಿ ಸಭೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಡಾ. ಮಹಾಂತೇಶ್‌ ನೆಲಾಗಣಿ, ತಾಲೂಕು ಅಧ್ಯಕ್ಷ ಮೈಲಾರಪ್ಪ ಉಂಕೀ, ಪದಾಧಿಕಾರಿಗಳಾದ ಶಿವಪ್ರಸಾದ ಹಾದಿಮನಿ, ಶಿವಪ್ಪ ಕೋಗಳಿ, ಬಸವಶ್ರೀ ಸೋಮನಾಳ ಇತರರು ಹಾಜರಿದ್ದರು.

ಶ್ರೀನಿವಾಸ ಚಿತ್ರಗಾರ ಅವರು ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದವರಾಗಿದ್ದು, ಇವರು ಯತ್ನಟ್ಟಿಯ ಸ.ಹಿ.ಪ್ರಾ ಶಾಲೆಯಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿದ್ದು, ಇವರು ಒಬ್ಬ ಹಿರಿಯ ಕವಿಯಾಗಿ 15ಕ್ಕೂ ಅಧಿಕ ಮಕ್ಕಳ ಸಾಹಿತ್ಯ ಸೇರಿದಂತೆ ಇತರ ಪುಸ್ತಕಗಳನ್ನು ಹೊರತಂದಿದ್ದಾರೆ. ಅಲ್ಲದೇ ವಿವಿಧ ಕವಿಗೋಷ್ಠಿಯಲ್ಲಿ ಹಾಗೂ ಸಭೆ ಸಮಾರಂಭಗಳಲ್ಲಿ ಉದ್ಘಾಟಕರಾಗಿ, ಅಧ್ಯಕ್ಷರಾಗಿ, ಉಪನ್ಯಾಸಕರಾಗಿ ಭಾಗವಹಿಸಿದ್ದಾರೆ. ಸ್ಥಳೀಯ ಸಾಹಿತ್ಯ ಸಮ್ಮೇಳನಗಳ ಕೆಲವು ಸ್ಮರಣ ಸಂಚಿಕೆಗಳಲ್ಲಿ ಸಂಪಾದಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರನ್ನು ಕೊಪ್ಪಳ ತಾಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.  https://aratt.ai/@vishwaroopa_news_blog