ರಾಜಮಾತೆ ಲಲಿತಾರಾಣಿ ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ.
ಗಂಗಾವತಿ:ಇಂದು ತುಂಗಭದ್ರಾ ನದಿಯ ಮಲೀನತೆಯಿಂದಾಗಿ ನದಿ ನೀರು ಕುಡಿಯಲು ಮಾತ್ರವಲ್ಲ, ಬಳಸಲು ಕೂಡ ಯೋಗ್ಯವಿಲ್ಲದಂತಾಗಿದೆ. ಇದು ಹೀಗೆ ಮುಂದುವರೆದರೆ ನಮ್ಮ ಮಕ್ಕಳಿಗೆ ಮುಂದಿನ ತಲೆಮಾರಿನ ಭವಿಷ್ಯವಿಲ್ಲದಂತಾಗುತ್ತದೆ ಎಂದು ರಾಜಮಾತೆ ಶ್ರೀಮತಿ ಲಲಿತಾರಾಣಿಯವರು ಅಭಿಪ್ರಾಯಪಟ್ಟರು. ಅವರು ಇಂದು ಅಂಜನಾದ್ರಿಯಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ ಪ್ರಚಾರ ರಥಕ್ಕೆ ಇಂದು ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು-ಮೂರು ದಶಕಗಳಿಂದಲೂ ತುಂಗಭದ್ರಾ ನದಿಯ ನೀರನ್ನು ನಾವೆಲ್ಲರೂ ಕುಡಿಯುತ್ತಿದ್ದೇವೆ. ಆದರೆ ನದಿಯ ನೀರು ಮಲೀನತೆಯಾಗುತ್ತಿರುವುದರಿಂದ ನಮ್ಮ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಶುದ್ದ ನೀರು,…