ಡಿಸೆಂಬರ್-೧೮ ಬುಧವಾರ ಹೊಸಕೇರಾ ಗ್ರಾಮದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ
ಗಂಗಾವತಿ: ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಮತ್ತು ಹಲ್ಲಿನ ಆಸ್ಪತ್ರೆ ಗಂಗಾವತಿ, ಇವರುಗಳ ಸಹಯೋಗದಲ್ಲಿ ಡಿಸೆಂಬರ್-೧೮ ಬುಧವಾರ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಹೊಸಕೇರಾ ಗ್ರಾಮದ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸಕೇರಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಸುನಿತಾ ಎಸ್. ಮತ್ತು ಸ್ವಾಮಿ ವಿವೇಕಾನಂದ ಸೇವಾ…