ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ರಾಯಭಾರಿಗಳು – ನಾಗರಾಜ್ ಎಸ್. ಗುತ್ತೇದಾರ್
ನಗರದ ಪ್ರತಿಷ್ಠಿತ ಸಂಕಲ್ಪ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಕಲ್ಪ ಸಂಸ್ಥೆಯ ಕಾರ್ಯಾಧ್ಯಕ್ಷರು ಮತ್ತು ವಕೀಲರಾದ ನಾಗರಾಜ್ ಎಸ್. ಗುತ್ತೇದಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಚುನಾವಣೆಗಳು ಅಧಿಕಾರವನ್ನು ಶಾಂತಿಯುತವಾಗಿ ಒಬ್ಬರಿಂದ ಒಬ್ಬರಿಗೆ ಹಸ್ತಾಂತರಿಸಲು ಸಹಾಯಮಾಡುತ್ತವೆ ಎಂಬುದನ್ನು ಅವರು…
