
ನಮ್ಮ ಊರು ಹಾಸನ ಶಿಲ್ಪಕಲೆಯ ಶಾಸನ ಗಾಯಕ ಆರ್. ರಾಮಶಂಕರಬಾಬು
ಮಾತನಾಡುವಾಗ ಉಗ್ಗುವಿಕೆಯ ತೊಂದರೆಯಿಂದ ತೊದಲುವ ವ್ಯಕ್ತಿ ಹಾಡುವಾಗ ಸುಲಲಿತವಾಗಿ ಹಾಡುತ್ತಾರೆ ಎಂದರೆ ಈ ಸಾಧನೆಯ ಹಿಂದೆ ದೃಢ ಸಂಕಲ್ಪ ಮೇಳೈಸಿದೆ ಎನ್ನಬಹುದು. ತನ್ನ ಉಗ್ಗುವಿಕೆಯ ತೊಂದರೆಗೆ ಹಾಡುಗಾರಿಕೆಯಿಂದ ಪರಿಹಾರ ಕಂಡುಕೊಂಡ ಹಾಸನದ ಆರ್. ರಾಮಶಂಕರಬಾಬು ಜಿಲ್ಲೆಯ ಪ್ರತಿಭಾನ್ವಿತ ಗಾಯಕರು. ಉಗ್ಗು ಇದ್ದರೂ ಹಾಡಿ ಹಿಗ್ಗುವ ಮುಖೇನ ತಮ್ಮ ಬಾಳಿನ ನೋವು ಮರೆಯುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಉಗ್ಗುವಿಕೆ ತೊಂದರೆಯಿಂದ ಮಾತನಾಡಲು ಕಷ್ಟಪಡುತ್ತಿದ್ದ ಬಾಬು ಛಲ ಮತ್ತು ದೃಢಚಿತ್ತದಿಂದ ಹಾಡುವುದನ್ನು ಅಭ್ಯಾಸ ಮಾಡಿಕೊಂಡವರಾಗಿದ್ದರು. ಜಾನಪದ ಹಾಡುಗಳನ್ನು ಹಾಡುವುದರ ಜೊತೆಗೆ ಕಂಜರ…