
ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಯವರ ೭೫ನೆಯ ವರ್ಧಂತಿ ಮಹೋತ್ಸವ.. ಸನಾತನದ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ: ನಾರಾಯಣ ವೈದ್ಯ
ಗಂಗಾವತಿ: ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರಿಗೆ ಸಲ್ಲುತ್ತದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಏಪ್ರಿಲ್-೩ ಗುರುವಾರ ಶೃಂಗೇರಿಯ ಜಗದ್ಗುರುಗಳಾದ ಪರಮಪೂಜ್ಯ ಭಾರತೀ ತೀರ್ಥ ಮಹಾಸ್ವಾಮಿಗಳ ೫೦ನೇ ವರ್ಷದ ಸುವರ್ಣ ಸಂಭ್ರಮ ಹಾಗೂ ವಜ್ರೋತ್ಸವ ೭೫ನೇಯ ವರ್ಧಂತಿ ಮಹೋತ್ಸವ ಸಮಾರಂಭದ ನಿಮಿತ್ಯ ಶಂಕರ ಮಠದಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದ ಧರ್ಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವಸಾನದ ಅಂಚಿನಲ್ಲಿದ್ದ ಹಿಂದೂ ಧರ್ಮವನ್ನು…