ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಡಿಸೆಂಬರ್-10 ರಂದು ಬೆಳಗಾವಿ ಅಧಿವೇಶಕ್ಕೆ ಮುತ್ತಿಗೆ

ಗಂಗಾವತಿ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಡಿಸೆಂಬರ್-10 ರಂದು ಬೆಳಗಾವಿ ಅಧಿವೇಶನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಎಂದು ಪಂಚಮಸಾಲಿ ಸಮಾಜದ ಅಧ್ಯಕ್ಷ ನ್ಯಾಯವಾದಿ ಶಿವಪ್ಪ ಯಲಬುರ್ಗಿ ಹೇಳಿದರು.

ಅವರು ಶನಿವಾರದಂದು ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕೂಡಲಸಂಗಮ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮಿಯವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪಂಚಮಸಾಲಿ ಸಮಾಜ ಬಾಂಧವರು ಬೆಳಗಾವಿ ಚಲೋ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 5000 ಅಧಿಕ ಸಮಾಜ ಬಾಂಧವರು ಟ್ರ್ಯಾಕ್ಟರ್ ಮೂಲಕ ಬೆಳಗಾವಿ ಅಧಿವೇಶನಕ್ಕೆ ಆಗಮಿಸಲಿದ್ದಾರೆ. ಇವರ ಜೊತೆಗೆ ಸಮಾಜದ 47 ವಕೀಲರು ಅವರಲ್ಲಿ 35ಕ್ಕೂ ಅಧಿಕ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ಅವಶ್ಯವಾಗಿದ್ದು. ಇತ್ತೀಚಿಗೆ ಕೊಪ್ಪಳದಲ್ಲಿ ಜರುಗಿದ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶೇಕಡ 95ರಷ್ಟು ಅಂಕ ಪಡೆದ ಸಮಾಜ ಬಾಂಧವರಿಗೆ ನೇಮಕಾತಿ ದೊರೆಯದೆ ಉದ್ಯೋಗದಿಂದ ವಂಚಿತರಾಗಿದ್ದಾರೆ ಕಳೆದ ಆರು ವರ್ಷದಿಂದ ಮೀಸಲಾತಿಗೆ ಉಭಯ ಪೀಠಾಧಿಕಾರಿಗಳಿಂದ ಹೋರಾಟ ನಡೆಸುತ್ತಾ ಬರಲಾಗಿದ್ದು. ಯಾವುದೇ ಆಡಳಿತರೂಢ ಪಕ್ಷಗಳ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಖಂಡನಿಯವಾಗಿದೆ. ರಾಜ್ಯ ಸರ್ಕಾರದಲ್ಲಿ 22 ಜನ ಶಾಸಕರನ್ನು ಹೊಂದಿದ್ದು ಎಲ್ಲಾ ಶಾಸಕರು ಪಕ್ಷ ಭೇದ ಮರೆತು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಹಲವು ಕ್ಷೇತ್ರದಲ್ಲಿ ಹಿಂದುಳಿದ ಸಮಾಜ ಪಂಚಮಸಾಲಿಯಾಗಿದ್ದು ಈ ಬಾರಿಯ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ 2ಎ ಮೀಸಲಾತಿ ಅನುಷ್ಠಾನಕ್ಕೆ ತರಬೇಕೆಂದು ಬೃಹತ್ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ನಾಗರಾಜ್ ಬರಗೂರು ಎಸ್ ವೀರೇಶಪ್ಪ ಹಣವಾಳ್. ದೇವರಾಜ್ ಕತ್ತಿ, ವೀರೇಶಪ್ಪ ಮಾಲಿ ಪಾಟೀಲ್ ಮಹೇಶ್ ಉಪಸ್ಥಿತರಿದ್ದರು.

Leave a Reply