ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ

ಗಂಗಾವತಿ: ಭಾರತ ಸೇವಾದಳ ಮತ್ತು ಶಿಕ್ಷಕರ ಸಂಘದ ಸಹಕಾರದೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಕರು ಇಲಾಖೆ ರೂಪಿಸುವ ಕಾರ್ಯಕ್ರಮಗಳಾದ ವಿಶೇಷ ತರಗತಿ, ಗುಂಪು ಅಧ್ಯಯನ, ೨೦ ಅಂಶಗಳ ಕಾರ್ಯಕ್ರಮಗಳು, ಪೂರ್ವಸಿದ್ಧತಾ ಪರೀಕ್ಷೆಗಳು, ಭೌತಿಕ ಸೌಕರ್ಯಗಳು ಸೇರಿದಂತೆ ವಿನೂತನ ಯೋಜನೆಗಳೊಂದಿಗೆ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆ ಬಸಾಪಟ್ಟಣದಲ್ಲಿ ಭಾರತ ಸೇವಾದಳ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ನಾಯಕತ್ವ ಶಿಬಿರ ಮತ್ತು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರಕ್ಕೆ ಭೇಟಿ ನೀಡಿದ ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ್ ಹೇಳಿದರು. ಈ ಸಂದರ್ಭದಲ್ಲಿ ಮಕ್ಕಳ ಕಲಿಕಾ ಚಾರ್ಟ್ಗಳನ್ನು ಬಿಡುಗಡೆ ಮಾಡಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ ಹರ್ತಿಯವರು ಮಾತನಾಡಿ ಫಲಿತಾಂಶ ಸುಧಾರಣೆಗಾಗಿ ಕೊಪ್ಪಳ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರು ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಭಾರತ ಸೇವಾದಳ ಸಹಕಾರದೊಂದಿಗೆ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಭಾರತ ಸೇವಾದಳ ಜಿಲ್ಲಾ ಸಂಘಟನೆಯ ಕುಮಾರಸ್ವಾಮಿ ಹೆಚ್.ಬಳ್ಳಾರಿ, ತಾಲೂಕು ಅಧಿನಾಯಕ ಶಿವಾನಂದ ತಿಮ್ಮಾಪೂರ, ಪ್ರಭಾರಿ ಮುಖ್ಯೋಪಾಧ್ಯಾಯ ಹನುಮೇಶ, ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ಸಂಪನ್ಮೂಲ ಶಿಕ್ಷಕರು ಹಾಗೂ ಬಾಲಕರ ಪ್ರೌಢಶಾಲೆಯ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಸಿಬ್ಬಂದಿಯವರು ಉಪಸ್ಥಿತರಿದ್ದರು.

Leave a Reply