ಗಂಗಾವತಿ ತಾಲೂಕಿನ ಆಚಾರನರಸಾಪೂರದಲ್ಲಿ ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬ ಅದ್ದೂರಿ ಆಚರಣೆ

ಗಂಗಾವತಿ: ಇತ್ತೀಚೆಗೆ ಫೆಬ್ರವರಿ-೨೧ ರಂದು ಮರಳಿ ಕ್ಲಸ್ಟರ್‌ನ ಕಲಿಕಾ ಹಬ್ಬವನ್ನು ತಾಲೂಕಿನ ಆಚಾರ ನರಸಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು ಎಂದು ಮರಳಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ ಕೆ.ಎಂ ರವರು ಪ್ರಕಟಣೆಯಲ್ಲಿ ತಿಳಿಸಿದರು.

ಅವರು ಈ ಕಲಿಕಾ ಹಬ್ಬದಲ್ಲಿ ಶಿಕ್ಷಣ ಪ್ರೇಮಿ ನಾಗರಾಜ ಬರಗೂರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾರಟಗಿ ವಲಯದ ಶಿಕ್ಷಣ ಸಂಯೋಜಕರಾದ ರಾಘವೇಂದ್ರ ಪಿ.ಸಿ ಇವರು ದೀಪ ಬೆಳಗಿಸುವುದರೊಂದಿಗೆ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿಗಳಾದ ನಾಗರಾಜ್ ಬರಗೂರು ಮಾತನಾಡಿ ಶಾಲೆಯ ಶ್ರೇಯೋಭಿವೃದ್ಧಿಗಾಗಿ ನಾವು ಸದಾ ಬೆಂಬಲವನ್ನು ನೀಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಮರಳಿ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುಮಂಗಳ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹನುಮಂತಪ್ಪ, ಚಂದ್ರೇಗೌಡ, ಚನ್ನಮಲ್ಲಿಕಾರ್ಜುನ ಮಠ ಟ್ರಸ್ಟ್ ಕಮಿಟಿಯ ಸದಸ್ಯರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಜಂಬಣ್ಣ ಹಾಗೂ ಗಾದಿಲಿಂಗಪ್ಪ, ಲಿಂಗನಗೌಡ ಎಂ.ಪಿ., ದ್ಯಾಮಣ್ಣ ಊರಿನ ಗಣ್ಯರು, ಹಿರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕ್ಲಸ್ಟರ್‌ನ ಎಲ್ಲಾ ಶಾಲೆಯ ಮುಖ್ಯ ಗುರುಗಳು ಹಾಗೂ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply