ಗಂಗಾವತಿ: ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಗೌರವಾಧ್ಯಕ್ಷರಾದ ನರಸಿಂಹಲು ಚಿಂತಲಕುಂಟ, ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಇವರುಗಳ ನೇತೃತ್ವದಲ್ಲಿ ಮಾರ್ಚ್-೩ ಸೋಮವಾರ ಗಂಗಾವತಿ ನಗರದ ಸರ್ಕೀಟ್ ಹೌಸ್‌ನಲ್ಲಿ ಕಾರಟಗಿ ತಾಲೂಕ ಯುವ ಘಟಕದ ಅಧ್ಯಕ್ಷರನ್ನಾಗಿ ದೇವರಾಜ ಬೂದುಗುಂಪ ಅವರನ್ನು ನೇಮಕ ಮಾಡಲಾಯಿತು.
ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿಯವರು ನೇಮಕಾತಿ ಆದೇಶ ಪತ್ರ ನೀಡಿ, ಕಾರಟಗಿ ತಾಲ್ಲೂಕ ಕೇಂದ್ರದಾಧ್ಯಂತ ಪ್ರವಾಸ ಮಾಡಿ ಅಥವಾ ಪತ್ರಿಕಾ ಪ್ರಕಟಣೆಯ ಮೂಲಕ ಸಂಘಟನೆ ಬಲಪಡಿಸಲು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.