ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಗಂಗಾವತಿ: ನಗರದ ಹಿರೇಜಂತಕಲ್‌ನ ಸರಕಾರಿ ಪ್ರೌಢಶಾಲೆಯ ೨೦೨೪-೨೫ ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಮಾರ್ಚ್-೮ ಶನಿವಾರ ನಗರಸಭೆ ಸದಸ್ಯರಾದ ಶ್ರೀಮತಿ ಹುಲಿಗೆಮ್ಮ ಕಿರಿಕಿರಿ ಅವರು ವೇದಿಕೆ ಮೇಲೆ ಹಾಸಿನರಾದ ಎಲ್ಲಾ ಗಣ್ಯರೊಂದಿಗೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ವಿ.ಗೊಂಡಬಾಳ ವಹಿಸಿ ಮಾತನಾಡಿ, ಮಕ್ಕಳಲ್ಲಿ ಸಹನೆ ಸತತ ಪರಿಶ್ರಮ ಧನಾತ್ಮಕ ಚಿಂತನೆ ಕಠಿಣ ಪರಿಶ್ರಮಗಳು ಯಶಸ್ಸಿನ ಮೆಟ್ಟಿಲುಗಳು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ “ಸಹನ ರವಿ ನಾಯಕ”, “ನಾಗರತ್ನ”, “ಪ್ರವೀಣ್” ಇವರಿಗೆ ನಗದು ಬಹುಮಾನಗಳನ್ನು ಹಾಗೂ ಪದಕಗಳನ್ನು ನೀಡಿ ಗೌರವಿಸಲಾಯಿತು. ಶಾಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿಷಯವಾರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ನಗದು ಬಹುಮಾನಗಳನ್ನು ನೀಡಿದರು. ಅದೇ ರೀತಿ ವಿಜ್ಞಾನ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗಂಗಾವತಿ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಪರಶುರಾಮ್ ಕಿರಿಕಿರಿಯವರು ಮಾತನಾಡಿ, ಮಕ್ಕಳಲ್ಲಿ ಅಂಬೇಡ್ಕರ್ ಅವರ ಆದರ್ಶವನ್ನು ಮೈಗುಡಿಸಿಕೊಂಡು, ಸತತ ಅಭ್ಯಾಸ ಹಾಗೂ ಪರಿಶ್ರಮದಿಂದ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ದೇಶಕ್ಕೆ ಮಾದರಿ ಪ್ರಜೆಗಳಾಗಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಶ್ರೀಮತಿ ಪಾರ್ವತಿ, ಶ್ರೀಮತಿ ಹುಲಿಗೆಮ್ಮ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಶ್ರೀಮತಿ ನಸೀಮಾ ಬಾನು ಮಾತನಾಡಿದರು.
ಶ್ರೀಮತಿ ಸರಿತಾ ಪೂಜಾರಿ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಾ ಜೋಶಿ ವಾರ್ಷಿಕ ವರದಿ ವಾಚನ ಮಂಡಿಸಿದರು.

ಶ್ರೀಮತಿ ಸುಧಾ ಡಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿದರೆ, ಕುಮಾರಸ್ವಾಮಿ ಸ್ವಾಗತಿಸಿ, ಶ್ರೀಮತಿ ಜಯಶ್ರೀ ವಂದನಾರ್ಪಣೆಗೈದರು. ಸಂಗೀತ ಶಿಕ್ಷಕರಾದ ಮಾರೆಪ್ಪ ಮಕ್ಕಳೊಂದಿಗೆ ಪ್ರಾರ್ಥನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ವಾರ್ಡಿನ ಗುರುಹಿರಿಯರು ಉಪಸ್ಥಿತರಿದ್ದರು.

Leave a Reply