ಗಂಗಾವತಿ: ಕಳೆದ ೨೦೨೩ ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಗಂಗಾವತಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿರುವ ಮತ್ತು ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನೆರವೇರಿಸಲು ಸಹಾಯ, ಸಹಕಾರ ನೀಡಿದ ಜನಪ್ರಿಯ ಶಾಸಕರಾದ ಶ್ರೀ ಗಾಲಿ ಜನಾರ್ಧನರೆಡ್ಡಿಯವರಿಗೆ ಮಾರ್ಚ್-೨೭ ಗುರುವಾರ ಸಾಹಿತ್ಯ ಸಮ್ಮೇಳನದ ವೇದಿಕೆ ಮುಂಭಾಗದಲ್ಲಿ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.