ಗಂಗಾವತಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗಂಗಾವತಿಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಸವನದುರ್ಗದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಛತ್ರಪ್ಪ ತಂಬೂರಿ ಅವರು ವಿದ್ಯಾರ್ಥಿಗಳಿಗೆ ಯೋಗವನ್ನು ವಿವರಿಸಿದರು. ಅವರು ಯೋಗ, ಪ್ರಾಣಾಯಾಮ ಹಾಗೂ ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿಗಳ ಓದು ಮತ್ತು ಏಕಾಗ್ರತೆಯ ಅಭಿವೃದ್ಧಿಗೆ ಯೋಗ ಮತ್ತು ಧ್ಯಾನ ಹೇಗೆ ಸಹಾಯಕವಾಗಬಹುದು ಎಂಬುದನ್ನು ಅತ್ಯಂತ ಸ್ಪಷ್ಟವಾಗಿ ತಿಳಿಸಿದರು.ಯೋಗ ಮತ್ತು ಪ್ರಾಣಾಯಮದ ಆಸನಗಳನ್ನು ಮಾಡಿ ತೋರಿಸಿ, ಯೋಗದ ಮಧ್ಯೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ನೈತಿಕ ಮೌಲ್ಯಗಳನ್ನು ಹೇಳುವ ಮೂಲಕ ಸ್ವಯಂ ಸೇವಕರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ರುದ್ರೇಶ್ ತಬಾಲಿ, ಹಿರಿಯ ಉಪನ್ಯಾಸಕರಾದ ಸೋಮಶೇಖರಗೌಡ, ಚಂದ್ರಶೇಖರ ರೆಡ್ಡಿ, ಲಿಂಗಣ್ಣ ಜಂಗಮರಹಳ್ಳಿ, ಅಜಗರ್ ಪಾಷಾ, ಈಶ್ವರಪ್ಪ, ಕುಮಾರಸ್ವಾಮಿ, ಶ್ರೀಮತಿ ರಮಾ, ಶ್ರೀಮತಿ ಶ್ರೀದೇವಿ, ಶ್ರೀಮತಿ ಲಕ್ಷೀ, ಚಿದಾನಂದ ಮೇಟಿ, ಶ್ರೀಮತಿ ಕನಕಮ್ಮ, ಮಹೇಶ್ ಹಿರೇಮಠ, ನಿರುಪಾದಿ, ಶ್ರೀಮತಿ ಕವಿತಾ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕ, ಸೇವಕಿಯರು ಉಪಸ್ಥಿತರಿದ್ದರು.
ಗ್ರಂಥ ಪಾಲಕರಾದ ರಮೇಶ ಗಬ್ಬೂರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತಾ, ಛತ್ರಪ್ಪ ತಂಬೂರಿ ಅವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಪ್ರಾಚಾರ್ಯರು, ಉಪನ್ಯಾಸಕರು, ಗ್ರಂಥಪಾಲಕರು ಮತ್ತು ವಿದ್ಯಾರ್ಥಿಗಳೆಲ್ಲಾ ಸೇರಿ ಯೋಗವನ್ನು ಮಾಡುವುದರ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಿದರು.