ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಸಮಾಜ ಸೇವಕರಾದ ಮಂಜುನಾಥ ಕಲಾಲ್ ಇವರಿಂದ ಆನೆಗುಂದಿ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಗಂಗಾವತಿ: ಗಂಗಾವತಿ ತಾಲೂಕಿನ ಆನೆಗೊಂದಿ, ಸಾಣಾಪುರ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ವಿತರಣೆ ಕಾರ್ಯಕ್ರಮ ಜುಲೈ 03 ಗುರುವಾರ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಎಂದು ಸಮಾಜಸೇವಕರಾದ ಮಂಜುನಾಥ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಜುನಾಥ ಕಲಾಲ್ ಅವರು ಮಾತನಾಡುತ್ತಾ, “ನಾವು ಕಳೆದ 13 ವರ್ಷಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿದ್ದೇವೆ” ಎಂದು ತಿಳಿಸಿದರು. ಲಾಕ್‌ಡೌನ್ ಸಮಯದಲ್ಲಿ 6000ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ.

ಪೌರಕಾರ್ಮಿಕರಿಗೆ ಆಹಾರ ಕಿಟ್, ಶಾಲಾ ಮಕ್ಕಳಿಗೆ 2013ರಿಂದ ಪ್ರತಿವರ್ಷ ನೋಟ್ ಪುಸ್ತಕ ವಿತರಣೆಯ ಕಾರ್ಯ, ದೇವಸ್ಥಾನ ಜೀರ್ಣೋದ್ಧಾರ, ಬಡರೋಗಿಗಳಿಗೆ ಚಿಕಿತ್ಸಾ ಸಹಾಯ, ಎಂ.ಎನ್.ಎ. ಕಾಲೇಜಿಗೆ ಗೇಟ್ ಕೊಡುಗೆ, ಆಟೋ ಚಾಲಕರು ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಈ ನಿಟ್ಟಿನಲ್ಲಿ, ಜುಲೈ 03ರಂದು ಆನೆಗೊಂದಿಯ ಸರ್ಕಾರಿ ಪೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮತ್ತು ಆನೆಗುಂದಿ ದುರ್ಗಾದೇವಿ ದೇವಾಲಯದ ಪೂಜ್ಯ ಶ್ರೀ ಬ್ರಹ್ಮಾನಂದ ಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಗೆ ಜನಪ್ರಿಯ ಶಾಸಕ ಗಾಲಿ ಜನಾರ್ಧನರೆಡ್ಡಿಯವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್‌ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ, ಮಾಜಿ ಶಾಸಕರು ಪರಣ್ಣ ಮುನವಳ್ಳಿ, ರಾಜವಂಶಸ್ಥೆ ಲಲಿತಾರಾಣಿ, ಶ್ರೀಕೃಷ್ಣದೇವರಾಯಲು, ಹರಿಹರದೇವರಾಯಲು ಭಾಗವಹಿಸಲಿದ್ದಾರೆ.
ಇದೇ ವೇಳೆ, ಆನೆಗುಂದಿ ಗ್ರಾ.ಪಂ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯ್ಕ, ಉಪಾಧ್ಯಕ್ಷೆ ಪೂರ್ಣಿಮಾ, ಮಲ್ಲಾಪುರ ಗ್ರಾ.ಪಂ ಅಧ್ಯಕ್ಷ ಛತ್ರಪ್ಪ ಲಂಬಾಣಿ, ಸಣಾಪುರ ಅಧ್ಯಕ್ಷ ಅಶೋಕ್, ಸಂಗಾಪುರ ಅಧ್ಯಕ್ಷೆ ಮಂಜುಳಾ ಲೋಕೇಶ್ ನಾಯ್ಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿಜಯಕುಮಾರರ ಉಪಸ್ಥಿತಿಯು ಕಲ್ಪಿಸಲಾಗಿದೆ.
ಆನೆಗುಂದಿ, ಸಂಗಾಪುರ, ಸಣಾಪುರ, ಮಲ್ಲಾಪುರ ಗ್ರಾ.ಪಂ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು, ವಿದ್ಯಾರ್ಥಿಗಳ ಪಾಲಕರು ಮತ್ತು ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಲಾಗಿದೆ.
ಮಾಹಿತಿಗಾಗಿ:
(ಮಂಜುನಾಥ ಕಲಾಲ್)
ಸಮಾಜ ಸೇವಕರು, ಗಂಗಾವತಿ
ಮೊ.ನಂ: ೮೯೭೦೬೪೭೦೮೦

Leave a Reply