ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಗಂಗಾವತಿ ನಗರಸಭೆ ವ್ಯಾಪ್ತಿಯ ಪಂಪಾ ನಗರದ ಗೋಂದೊಳಿ ಸಮಾಜದ ಶ್ರೀ ಪಾಂಡುರಂಗ ಮಾಹಿತಿ ದೇವಸ್ಥಾನಕ್ಕೆ ರವಿವಾರದಂದು ಆಷಾಢ ಮಾಸದ ಪ್ರಥಮ ಏಕಾದಶಿಯ ಪ್ರಯುಕ್ತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದರ್ಶನ ಪಡೆದು ಪುನೀತರಾದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಪ್ರಕಾಶ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ಪಾಂಡುರಂಗ ದೇವಸ್ಥಾನದಲ್ಲಿ ಬೆಳಿಗ್ಗೆ ಕಾಕಡ ಆರತಿ ಪಂಚಾಮೃತ ಅಭಿಷೇಕ ಅಷ್ಟೋತ್ತರ ಶತನಾಮಾವಳಿ ಸೇರಿದಂತೆ ವಿವಿಧ ಹೂಗಳಿಂದ ಅಲಂಕಾರಿಸಲಾಗಿತ್ತು ಎಂದು ತಿಳಿಸಿದರು.

ವಿವಿಧ ಸಮಾಜದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Leave a Reply