ಗಂಗಾವತಿ: ರಾಜ್ಯದ ಚಿತ್ರರಂಗ ವಿಭಾಗದ ಪ್ರತಿಷ್ಠಿತ ಪತ್ರಿಕೆಯಾದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಉತ್ತಮ ಕನ್ನಡಿಗ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ.
ಅದರಂತೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಅವರು ಆಯ್ಕೆಯಾಗಿದ್ದಾರೆ.
ಅವರಿಗೆ ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಚನ್ನಬಸವ ಕೊಟಗಿಯವರು ಗಂಗಾವತಿಯ ನಿವಾಸಿಯಾಗಿದ್ದು, ಅವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸಿದ್ದಾರೆ. ಮತ್ತು ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಪ್ರಸ್ತುತ ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರ ಸೇವೆಯನ್ನು ಗುರುತಿಸಿದ ಚಿತ್ರ ಸಂತೆ ಪತ್ರಿಕೆಯ ಮುಖ್ಯ ಸಂಪಾದಕರಾದ ಗಿರೀಶ್ ವಿ. ಗೌಡ ರವರು ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಇವರಿಗೆ ಗಂಗಾವತಿಯ ಸಮಸ್ತ ನಾಗರಿಕರು, ಕಲಾವಿದರು, ಪತ್ರಕರ್ತರು, ಸಾಹಿತಿಗಳು, ಸಂಘ-ಸಂಸ್ಥೆಗಳು ಅಭಿನಂದನೆಗಳನ್ನು ಸಲ್ಲಿಸಿವೆ.
ಮಾಹಿತಿಗಾಗಿ:
ಚನ್ನಬಸವ ಕೊಟಗಿ
ಐತಿಹಾಸಿಕ ಸ್ಥಳಗಳ ಮಾರ್ಗದರ್ಶಕರು.
ಹಂಪಿ, ಸಾ|| ಗಂಗಾವತಿ
ಮೊ.ನಂ: ೯೪೮೧೦೮೭೦೦೯