ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಕೆ.ಎಸ್. ಆಸ್ಪತ್ರೆ, ಕೊಪ್ಪಳ, ಲಯನ್ ಕಣ್ಣಿನ ಆಸ್ಪತ್ರೆ, ಕೊಪ್ಪಳ, ಐದೃಷ್ಟಿ ಕಣ್ಣಿನ ಆಸ್ಪತ್ರೆ, ಹೊಸಪೇಟೆ, ಶುಭಶ್ರೀ ಪಾರ್ಮಾಸ್ಯೂಟಿಕಲ್ಸ್, ಕನಕಗಿರಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ಜಿಲ್ಲಾ ಅಂಧತ್ವ ನಿವಾರಣಾ ಸಂಘ ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರು ಹಾಗೂ ಮುಸ್ಟೂರು ಗ್ರಾಮದ ಸಮಸ್ತ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಡಿಸೆಂಬರ್-೧೯ ಗುರುವಾರ ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೩:೦೦ ಗಂಟೆಯವರೆಗೆ ಉಚಿತ ಆರೋಗ್ಯ, ನೇತ್ರ ತಪಾಸಣಾ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕೆ. ಸುಬ್ರಹ್ಮಣ್ಯೇಶ್ವರರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದರು.
ಈ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು ಹಾಗೂ ಗಂಭೀರ ಕಾಯಿಲೆಗಳಾದ ಹೃದಯರೋಗ, ಕಣ್ಣಿನ ತಪಾಸಣೆ, ಸಕ್ಕರೆ ಕಾಯಿಲೆ, ಬಿ.ಪಿ., ದಂತಚಿಕಿತ್ಸೆ, ಎಲುಬು ಕೀಲು ಸಮಸ್ಯೆ, ಸ್ತ್ರೀರೋಗ ತಪಾಸಣೆ ಸೇರಿದಂತೆ ಮುಂತಾದ ಕಾಯಿಲೆಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ೯೪೪೮೨೨೫೬೬೬ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ.
