ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿ ನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ

ಗಂಗಾವತಿ ನಗರದ ಕನ್ನಡ ಜಾಗೃತಿ ಭವನದಲ್ಲಿ ನೂಲಹುಣ್ಣಿಮೆ ಪ್ರಯುಕ್ತ ಶಿವಾನುಗೋಷ್ಠಿ ಕಾರ್ಯಕ್ರಮ
ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಲಿಟಲ್ ಹಾರ್ಟ್ಸ್ ಶಾಲೆ ಹತ್ತಿರವಿರುವ ಕನ್ನಡ ಜಾಗೃತಿ ಸಮಿತಿ ಭವನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಆಗಸ್ಟ್-೧೨, ಮಂಳವಾರ, ನೂಲಹುಣ್ಣಿಮೆ ಪ್ರಯುಕ್ತ ೧೧ನೇ ಶಿವಾನುಭವ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಜರಾಜೇಶ್ವರಿ ಜಾನಪದ ಸಾಂಸ್ಕೃತಿಕ ಕಲಾಭಿವೃದ್ಧಿ ಸಂಘ (ರಿ), ಹಾನಗಲ್ಲ ಶ್ರೀ ಗುರು ಕುಮಾರೇಶ್ವರ ವೇದ ಮತ್ತು ಸಂಸ್ಕೃತ ಪಾಠಶಾಲೆ, ಹಾಗೂ ಕನ್ನಡ ಜಾಗೃತಿ ಸಮಿತಿ ಗಂಗಾವತಿ ಇವರುಗಳ ಸಹಯೋಗದಲ್ಲಿ ಆಯೋಜಿಸಿದೆ.
ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಗಂಗಾವತಿ ಕಲ್ಮಠದ ಮ.ನಿ.ಪ್ರ ಶ್ರೀ ಡಾ. ಕೊಟ್ಟೂರು ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಹೆಬ್ಬಾಳ ಬೃಹನ್ಮಠದ ಶ್ರೀ ಷ.ಬ್ರ. ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಮಾನವಿಯ ಮುಕ್ತಾಗುಚ್ಛ ಬೃಹನ್ಮಠ ಕಲ್ಮಠದ ಶ್ರೀ ಷ.ಬ್ರ. ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಹ ಉಪಸ್ಥಿತರಿರುತ್ತಾರೆ.
ಬಳಗಾನೂರು ಶ್ರೀ ಮರಿಶಿವಯೋಗಿಗಳ ಮಠದ ಶ್ರೀ ಮ.ನಿ.ಪ್ರ. ಸಿದ್ಧಬಸವ ಮಹಾಸ್ವಾಮಿಗಳು ಕೂಡ ಈ ಸಂದರ್ಭದಲ್ಲಿ ವಹಿಸಲಿದ್ದರೆ.
ಗೋಷ್ಠಿಯಲ್ಲಿ ಉಪನ್ಯಾಸವನ್ನು ಇಟಗಿ ಚಿಕ್ಕಮ್ಯಾಗೇರಿ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ. ೧೦೮ ಡಾ. ಗುರುಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ನೀಡಲಿದ್ದಾರೆ.
ಈ ಕಾರ್ಯಕ್ರಮವು ಸುಳೇಕಲ್ ಬೃಹನ್ಮಠದ ಪ.ಪೂ ಶ್ರೀ ಭುವನೇಶ್ವರಯ್ಯ ತಾತನವರು ಮತ್ತು ಅರಳಹಳ್ಳಿ ಬೃಹನ್ಮಠದ ಪ.ಪೂ ಶ್ರೀ ಗವಿಸಿದ್ದಯ್ಯ ತಾತನವರು ಹಾಗೂ ಪ.ಪೂ ಶ್ರೀ ಶರಣಬಸವ ದೇವರು ನೇತೃತ್ವದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಭಾಗವಹಿಸಲಿದ್ದಾರೆ. ಮಾಜಿ ಸಂಸದ ಶಿವರಾಮೇಗೌಡ ಮತ್ತು ಮಾಜಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿಯವರೂ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪೊಲೀಸ್ ಪಾಟೀಲ್ ಹಾಗೂ ಗಂಗಾವತಿ ತಾಲೂಕ ಅಧ್ಯಕ್ಷ ಗಿರೇಗೌಡ ಹೊಸಕೇರಾ ಕೂಡ ಭಾಗವಹಿಸಲಿದ್ದಾರೆ.
ಬಿ.ಜೆ.ಪಿ ಮುಖಂಡರಾದ ವಿರುಪಾಕ್ಷಪ್ಪ ಸಿಂಗನಾಳ, ಸಿದ್ರಾಮಯ್ಯಸ್ವಾಮಿ, ಸಂಗಮೇಶ ಸುಗ್ರೀವ, ಅಂತರಾಷ್ಟ್ರೀಯ ಹಾಸ್ಯ ಕಲಾವಿದ ಬೀಚಿ ಗಂಗಾವತಿ ಪ್ರಾಣೇಶ ಕೂಡ ಹಾಜರಾಗಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ. ಶಿವಕುಮಾರ ಮಾಲಿಪಾಟೀಲ್ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಾಹಿತಿಗಳು, ಕವಿಗಳು ಹಾಗೂ ಮಹಿಳೆಯರು ಭಾಗವಹಿಸಲು ಕೋರಲಾಗಿದೆ.

Leave a Reply