ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಗಂಗಾವತಿ ತಾಲೂಕಾ ಮಟ್ಟದ ೧೪ ವರ್ಷದೊಳಗಿನ ಬಾಲಕರ ಚದುರಂಗ ಸ್ಪರ್ಧೆಯನ್ನು ಆಯೋಸಿದೆ.
ಲಿಟಲ್ ಹಾರ್ಟ್ಸ್ ಸ್ಕೂಲ್ನ ವಿದ್ಯಾರ್ಥಿ ಪ್ರಣವ್ ಆಶ್ರೀತ ಪ್ರಥಮ ಸ್ಥಾನ ಗಳಿಸಿದ್ದಾನೆ. ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಗೌರವ ತಂದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಯನ್ನು ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ, ಮುಖ್ಯೋಪಾಧ್ಯಾಯಿನಿ ಪ್ರಿಯಾಕುಮಾರಿ ಮತ್ತು ಇತರೆ ಶಿಕ್ಷಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.