ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯ: ನಾಗರಾಜ್ ಗುತ್ತೇದಾರ್

ಶಿಕ್ಷಣದ ಜೊತೆಗೆ ಸಂಸ್ಕಾರವು ಅಗತ್ಯ: ನಾಗರಾಜ್ ಗುತ್ತೇದಾರ್

ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಕಾರ್ಯಧ್ಯಕ್ಷರಾದ ನಾಗರಾಜ್ ಎಸ್ ಗುತ್ತೇದಾರ್ ವಕೀಲರು ನಮ್ಮ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಬದುಕಿಗೆ ಬೇಕಾದ ಮೌಲ್ಯಗಳನ್ನು ಕಲಿಸುವ ಮೂಲಕ ಉದಾತ್ತ ಮೌಲ್ಯಗಳನ್ನು ಪೋಷಿಸುವ ಹಾಗೂ ಅವುಗಳನ್ನು ಯಥಾವತ್ತಾಗಿ ಸಮಾಜಕ್ಕೆ ಮುಂದುವರಿಸುವ ಕಾರ್ಯವನ್ನು ಮಾಡುತ್ತಿದೆ.

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಜೀವನದ ಉದಾತ್ತ ಮೌಲ್ಯಗಳು, ಆದರ್ಶಗಳು, ಸಂಸ್ಕಾರಗಳು, ಹಾಗೂ ನಮ್ಮ ಹಿರಿಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂದೇಶ ನೀಡಿದರು.

ಇಂದಿನ ಆಧುನಿಕ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣಗಳ ಒತ್ತಡಕ್ಕೆ ವಿದ್ಯಾರ್ಥಿಗಳು ಒಳಗಾಗದೆ ಬದುಕಿನ ನೈಜ ತಿರುಳನ್ನು ಆಸ್ವಾದಿಸುವ ಕಡೆ ಗಮನಹರಿಸಬೇಕಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾಗಿದ್ದು ಈ ಹಂತದಲ್ಲಿ ಪ್ರತಿಯೊಬ್ಬರು ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ಸಮಾಜದ ಮುಖ್ಯವಾಹಿನಿಯಲ್ಲಿ ಉನ್ನತ ಹುದ್ದೆಗೆ ಏರುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಹೇಮಂತ್ ರಾಜ್ ಕಲ್ಮಂಗಿಯವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಲುಕುಹಾಕಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷರು, ಪ್ರಾಂಶುಪಾಲರಾದ ಎಂ.ಆರ್ ಮಂಜು ಸ್ವಾಮಿ ಅವರು ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯ.

ವಿದ್ಯಾರ್ಥಿಗಳು ಉತ್ತಮ ಜೀವನ ನಡೆಸಲು ಇಂದಿನ ಕಠಿಣ ಪರಿಶ್ರಮವೇ ಕಾರಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಅಮಿತ್ ಕುಮಾರ್ ರೆಡ್ಡಿ, ಪದವಿ ಕಾಲೇಜಿನ ಪ್ರಾಚಾರ್ಯ ಬಸಪ್ಪ ಶಿರಿಗೇರಿ, ಉಪನ್ಯಾಸಕರಾದ ಶಂಕರಲಿಂಗಪ್ಪ ಕೊಪ್ಪದ, ನಾಗರಾಜ್ ಹೆಚ್., ಅಶೋಕ್, ಶಂಕರ್ ವಗರನಾಳ, ಶರಣಬಸವ, ಬಸನಗೌಡ ಹಾಗೂ ಅಧ್ಯಾಪಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಅವರ ಪಾಲಕರನ್ನು ಸಂಸ್ಥೆಯ ವತಿಯಿಂದ ಗೌರವಿಸಿ ಸತ್ಕರಿಸಲಾಯಿತು.

ಮಾಹಿತಿಗಾಗಿ:
ಬಸಪ್ಪ ಶಿರಿಗೇರಿ
ಪ್ರಾಚಾರ್ಯರು,
ಸಂಕಲ್ಪ ಮಹಿಳಾ ಪದವಿ ಮಹಾವಿದ್ಯಾಲಯ ಗಂಗಾವತಿ
ಮೊ.ನಂ: ೯೦೧೯೧೯೮೦೬೭

Leave a Reply