ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ವಿದ್ಯಾರ್ಥಿಗಳಿಗಾಗಿ ವಿವಿಧ ರೀತಿಯ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು.

ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಪಾಲ್ಗೊಂಡರು. “ಪುಟಾಣಿ ವಿದ್ಯಾರ್ಥಿಗಳು ದೇವರಿದ್ದಂತೆ, ಅವರನ್ನು ಇಂತಹ ವೇಷಭೂಷಣಗಳಲ್ಲಿ ನೋಡುವುದೇ ಭಾಗ್ಯವಿದ್ದಂತೆ” ಎಂದು ಶಾಲೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ಅವರು ತಮ್ಮ ಉದ್ಘಾಟನಾ ನುಡಿಗಳನ್ನಾಡಿದರು.

“ಶಾಲೆಯಲ್ಲಿ ಎಲ್ಲಾ ರೀತಿಯ ಆಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅದೇರೀತಿಯಾಗಿ ಕೃಷ್ಣ ಜನ್ಮಾಷ್ಠಮಿಯನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಗುತ್ತಿದೆ” ಎಂದು ಶಾಲೆಯ ಕಾರ್ಯದರ್ಶಿಗಳಾದ ಶ್ರೀ ರುಬೇನ್ ಮಿರಜ್‌ಕರ್ ಅವರು ತಿಳಿಸಿದರು.

“ವಿದ್ಯಾರ್ಥಿಗಳಿಗೆ ಇಂತಹ ಚಟುವಟಿಕೆಗಳನ್ನು ಏರ್ಪಡಿಸುವುದರಿಂದ ಮಕ್ಕಳಲ್ಲಿ ಸೃಜನಶೀಲತೆ ಮೂಡುತ್ತದೆ ಮತ್ತು ಅವರನ್ನು ಕಲಿಕೆ ಕಡೆಗೆ ಹೆಚ್ಚು ಆಕರ್ಷಣೆಯನ್ನು ಮಾಡುತ್ತದೆ” ಎಂದು ಶಾಲೆಯ ಆಡಳತಾಧಿಕಾರಿಗಳಾದ ಶ್ರೀ ಚಂದ್ರಕಾಂತ್ ರಾವ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಆರೋನ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ ನಾಯಕ, ನಿವೇದಿತಾ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ರೇಖಾ ಠಾಕೂರ್, ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾಹಿತಿಗಾಗಿ:
ಮಂಜುನಾಥ ನಾಯಕ
ಮುಖ್ಯೋಪಾಧ್ಯಾರು,
ಆರೋನ್ ಮೀರಜಕರ್ ಶಾಲೆ ಗಂಗಾವತಿ.
ಮೊ.ನಂ: ೯೯೮೦೫೧೯೩೨೭

Leave a Reply