ಗಂಗಾವತಿ: ಹಿರಿಯ ಕಾರ್ಮಿಕ ಹೋರಾಟಗಾರ ಭಾರಧ್ವಾಜ್ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಸ್ಥಾಪನೆಗೊಂಡಿತು.
ಕಲಬುರ್ಗಿ ಪ್ರಾದೇಶಿಕ ಕಛೇರಿಯ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿಯಿಂದ ನೋಂದಣಿಯಾಗಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತ್ರೀ ತಿಳಿಸಿದರು.
ಸಂಘದ ನೋಂದಣಿ ಸಂಖ್ಯೆ: ಐಅಏಂಐ/ಖಿU/P-೬೧೦೦೨೦೭೨/೨೦೨೫-೨೬ ಆಗಿದೆ.
ಇದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸ್ಥಾಪನೆಗೊಂಡಿದೆ.
ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಿದೆ.
ಈ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಮುಂದಿನ ತಿಂಗಳು ಸೆಪ್ಟೆಂಬರ್-೨೮ ರಂದು ನಗರದ ರಾಯಚೂರು ರಸ್ತೆಯಲ್ಲಿರುವ ಆಟೋನಗರದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಚೌಡಪ್ಪ, ಪ್ರಧಾನ ಕಾರ್ಯದರ್ಶಿಯಾದ ಮಹೆಬೂಬಸಾಬ ಲಾಠಿ, ಜಂಟಿ ಕಾರ್ಯದರ್ಶಿಯಾದ ಚಾಂದಪಾಷಾ, ಸಂಘಟನಾ ಕಾರ್ಯದರ್ಶಿ ಮರಿಸ್ವಾಮಿ, ಸಿಕಂದರ್, ಸಹಕೋಶಾಧ್ಯಕ್ಷರಾದ ರಸೂಲ್, ಸದಸ್ಯರಾದ ಜಗದೀಶ ಮೇಸ್ತಿç ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
