ಗಂಗಾವತಿ : ವಿದ್ಯಾನಗರ ವೈಜೆಆರ್ ಪಿಯು ಕಾಲೇಜ್ ನಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಣ್ಣಿನ ಗಣೇಶ ಮೂರ್ತಿಯನ್ನು ಅದ್ಧೂರಿಯಾಗಿ ಸ್ವಾಗತಿಸಿ ಐದು ದಿನ ಕಾಲೇಜಿನಲ್ಲಿ ಪ್ರತಿಷ್ಠಾಪಿಸಿ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
ರವಿವಾರ ವಿಸರ್ಜನ ವೇಳೆ ಯುವಕರು ಯುವತಿಯರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.ಗಣೇಶನ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷಪಟ್ಟರು.
ಈ ವೇಳೆ ಅಧ್ಯಕ್ಷ ಕಲ್ಯಾಣಂ ಜಾನಕಿರಾಮ್ ಮಾತನಾಡಿ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ, ಆಯಸ್ಸು, ಐಶ್ವರ್ಯ, ಶಾಂತಿ, ನೆಮ್ಮದಿ ನೀಡಿ ದೇವರು ಕಾಪಾಡಲಿ.
ಉತ್ತಮ ಮಳೆ, ಬೆಳೆ ಆಗಿ ರೈತರಲ್ಲಿ ಸಂತೋಷ ಉಂಟು ಮಾಡಲಿ ವಿದ್ಯಾರ್ಥಿಗಳಿಗೆ ವಿದ್ಯೆ ಬುದ್ಧಿ ಆ ವಿಘ್ನೇಶ್ವರ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಬಿ.ಕೋಟಯ್ಯ ಚೌಧರಿ, ನಿರ್ದೇಶಕ ಕಲ್ಯಾಣಂ ಜೈದೀಪ್ ಉಪನ್ಯಾಸಕ ವೃಂದ ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.