ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ  ಹಿರೇಬೆಣಕಲ್‌ನ ಸ.ಹಿ.ಪ್ರಾ ಶಾಲೆ ಖೋ-ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.

ಅದರಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಖೋ-ಖೋ ತಂಡವು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತರಾದ ಈ ತಂಡದ ವಿದ್ಯಾರ್ಥಿಗಳಿಗೆ ಹಿರೇಬೆಣಕಲ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾರೈಸಿದರು.

ಸರ್ವ ಸದಸ್ಯರು ಗ್ರಾಮದ ಶಿಕ್ಷಣ ಪ್ರೇಮಿಗಳು, ಕ್ರೀಡಾಭಿಮಾನಿಗಳು ಹಾಗೂ ನಾಗನಕಲ್ ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಅತ್ಯಂತ ಸಡಗರ ಸಂಭ್ರಮದಿದ ಅಭಿನಂದಿಸಿ, ಮುಂದಿನ ಕಲಬುರ್ಗಿ ವಿಭಾಗ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಲೆಂದು ತಂಡಕ್ಕೆ ಹಾರೈಸಿದರು.

Leave a Reply