ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು.
ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ ಮಹೇಶ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ.