ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ನೂತನವಾಗಿ ರಚನೆಗೊಂಡ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಭವನವನ್ನು ಒದಗಿಸಿಕೊಡಲು ಶಾಸಕರಿಗೆ ಮನವಿ.

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಇತ್ತೀಚೆಗೆ ರಾಜ್ಯಮಟ್ಟದಲ್ಲಿ ರಚನೆಯಾಗಿ ಉದ್ಘಾಟನೆಗೊಂಡು, ಈ ಸಂಘದ ಅಂಗಸಂಸ್ಥೆಗಳಾಗಿ ಹಲವು ಜಿಲ್ಲಾ ಸಮಿತಿಗಳು ಹಾಗೂ ತಾಲ್ಲೂಕು ಸಮಿತಿಗಳು ಈಗಾಗಲೇ ರಚನೆಯಾಗಿವೆ. ಅದರಂತೆ ನಮ್ಮ ಗಂಗಾವತಿ ತಾಲ್ಲೂಕು ಸಮಿತಿಯೂ ಕೂಡ ಸಕ್ರಿಯಗೊಂಡಿದ್ದು ಮತ್ತು ನಮ್ಮ ಸಂಘದಿಂದ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದೆ. ಕೂಡಲೇ ನಮ್ಮ ಸಂಘಕ್ಕೆ ಪತ್ರಿಕಾ ಭವನದ (PRESS HALL) ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸೆಪ್ಟೆಂಬರ್-೧೭ ರಂದು ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಡೆದ ತಾಲೂಕ ಸಾರ್ವಜನಿಕ ಧ್ವಜಾರೋಹಣದ ಸಂದರ್ಭದಲ್ಲಿ ಶಾಸಕರಾದ ಜನಾರ್ಧನರೆಡ್ಡಿಯವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಂಘದ ಗಂಗಾವತಿ ತಾಲೂಕ ಅಧ್ಯಕ್ಷರಾದ ಸಿ.ಡಿ ರಾಮಕೃಷ್ಣ ತಿಳಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಅವರು ಪ್ರಸ್ತುತ ನಮಗೆ ಯಾವುದೇ ಸ್ವಂತ ಕಟ್ಟಡ ಅಥವಾ ಸಭಾಂಗಣವಿಲ್ಲದ ಕಾರಣದಿಂದಾಗಿ, ವಿವಿಧ ಸಭೆ ಹಾಗೂ ಚಟುವಟಿಕೆಗಳನ್ನು ಸರಿಯಾದ ರೀತಿಯಲ್ಲಿ ನಡೆಸಲು ತೊಂದರೆ ಅನುಭವಿಸುತ್ತಿದ್ದೇವೆ. ದಯವಿಟ್ಟು ನಿಮ್ಮ ಸರಕಾರಿ ಕಚೇರಿ ವ್ಯಾಪ್ತಿಯಲ್ಲಿ ಪತ್ರಿಕಾ ಭವನವನ್ನು ಒದಗಿಸಿಕೊಡಬೇಕಾಗಿ ಶಾಸಕರಲ್ಲಿ ವಿನಂತಿಸಿಕೊಂಡರು. ಇದರಿಂದ ತಾಲ್ಲೂಕು ಮಟ್ಟದ ಪತ್ರಿಕೋದ್ಯಮ ಚಟುವಟಿಕೆಗಳಿಗೆ ಸೇರಿದಂತೆ ಪತ್ರಕರ್ತರಿಗೆ ಒಂದು ಕಾರ್ಯಾಲಯದ ವ್ಯವಸ್ಥೆ ಸಿಕ್ಕಂತಾಗುತ್ತದೆ. ಆದಷ್ಟು ಬೇಗ ನಮಗೆ ಪತ್ರಿಕಾ ಭವನ ವ್ಯವಸ್ಥೆ ಮಾಡಿಕೊಡಬೇಕೆಂದು ಸಂಘಟನೆಯ ಎಲ್ಲಾ ಪದಾಧಿಕಾರಿಗಳೊಂದಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಮನವಿ ಸ್ವೀಕರಿಸಿದ ಶಾಶಕರು, ನಿಮಗೆ ಆದಷ್ಟು ಬೇಗನೇ ಪತ್ರಿಕಾ ಭವನದ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ರಮೇಶ್ ಕೋಟೆ. ಗಂಗಾವತಿ ತಾಲೂಕ ಪ್ರಧಾನ ಕಾರ್ಯದರ್ಶಿಗಳಾದ ಆರ್ ಚನ್ನಬಸವ ಮಾನ್ವಿ, ಸದಸ್ಯರಾದ ಮಂಜುನಾಥ ವಣಗೇರಿ ಸೇರಿದಂತೆ ನಮ್ಮ ಸಂಘಕ್ಕೆ ಬೆಂಬಲ ನೀಡಿದ ಸುರೇಶ ಹಾಗೂ ಇತರ ಸದಸ್ಯರು ಇದ್ದರು.

Leave a Reply