ಹಾಸನ:ಸೆ-24: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ರವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 26-07-1934 ರಲ್ಲಿ ಜನಿಸಿದರು. ಆನೇಕ ಪ್ರಶಸ್ತಿಗಳಾದ ಸರಸ್ವತಿ ಸನ್ಮಾನ್ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹೀಗೆ ಆನೇಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅವರು ಲೇಖಕರಾಗಿ, ವಿಮರ್ಶಕರಾಗಿ, ಅಧ್ಯಾಪಕರಾಗಿ, ಕಥೆ, ಕಾಂದಬರಿ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.1999 ರಲ್ಲಿ ಕನಕಪುರದಲ್ಲಿ ನಡೆದ 67 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇವರು ನೂರಾರು ಕಾದಂಬರಿ ರಚಿಸಿದ್ದಾರೆ.
ಇವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ನಿಧನಕ್ಕೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಡಾ. ನಾಯಕರಹಳ್ಳಿ ಮಂಜೇಗೌಡ, ಗೌರವಾಧ್ಯಕ್ಷರಾದ ರವಿನಾಕಲಗೂಡು, ಕಲ್ಲಹಳ್ಳಿ ಹರೀಶ್, ಕತ್ತಿಮಲ್ಲೇನಹಳ್ಳಿ ಪರಮೇಶ್, ಸೋಮನಾಯಕ್ ದಿಬ್ಬೂರು ರಮೇಶ್, ಹರಳಹಳ್ಳಿ ರಂಗಸ್ವಾಮಿ, ಪುಟ್ಟಣ್ಣ ನಂದಕುಮಾರ, ಭಾರತ ಸೇವಾದಳ ವಲಯ ಸಂಘಟಕಿ ವಿ.ಎಸ್.ರಾಣಿ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಚೈತ್ರ ನಾಯಕರಹಳ್ಳಿ, ಉಪಾಧ್ಯಕ್ಷರಾದ ಗುಡುಗನಹಳ್ಳಿ ಮಂಜುನಾಥ ಮುಂತಾದವರು ಸಂತಾಪ ಸೂಚಿಸಿದ್ದಾರೆ.