ಇಂದು 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕುಷ್ಟಗಿ ತಾಲೂಕಿನ 13 ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಇಂದು ಡಿ: ೨೬ ಮಧ್ಯಾಹ್ನ ೪:00 ಘಂಟೆಗೆ ತಾಲೂಕಿನ ಹುಲಗೇರಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರೆಯಲಾಗಿದ್ದು, ಕುಷ್ಟಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡದ ಅಭಿಮಾನಿಗಳು, ಸಾರ್ವಜನಿಕರು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಲೆಂಕೆಪ್ಪ ವಾಲಿಕಾರ್ ಹಾಗೂ ಗೌರವ ಕಾರ್ಯದರ್ಶಿಗಳಾದ ಶರಣಪ್ಪ ಲೈನದ ಹಾಗೂ ರವೀಂದ್ರ ಬಾಕಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply