ತಾಲೂಕಿನ ಶ್ರೀರಾಮನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಅಬ್ದುಲ್ ಕಲಾಂ ರವರ ಜಯಂತಿ ಅಂಗವಾಗಿ ಸರಣಿ ಕಾರ್ಯಕ್ರಮಗಳ ಸಡಗರ ಸಂಭ್ರಮದಿಂದ ಜರುಗಿದವು. ನನ್ನ ಜನುಮದಿನಕ್ಕೂ ಹಾಗೂ ಪುಣ್ಯತಿಥಿಗೂ ರಜೆ ನೀಡಬೇಡಿ ನನ್ನನ್ನು ಹಾಗೂ ದೇಶವನ್ನು ಪ್ರೀತಿಸಿ ಗೌರವಿಸುವುದಾದರೆ ಹೆಚ್ಚು ಕೆಲಸ ಮಾಡಿ ಎಂದು ಹೇಳುವುದರ ಮೂಲಕ ಯುವಕರಿಗೆ ಚಿರಸ್ಫೂರ್ತಿಯಾಗಿರುವ ಡಾ. ಕಲಾಂ ರವರ ಆಶಯದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ನಮ್ಮ ಕಾಲೇಜು ಸ್ವಚ್ಛ ಕಾಲೇಜು ಅಭಿಯಾನದ ಅಡಿಯಲ್ಲಿ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್-15 ರಂದು ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದೈನಂದಿನ ತರಗತಿಗಳ ನಂತರ ಬೆಳಿಗ್ಗೆ 11:30ಕ್ಕೆ ಕಾಲೇಜು ಆವರಣ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಖುಷಿಯಿಂದ ಪಾಲ್ಗೊಡು ಕಾಲೇಜಿನ ಮೈದಾನವನ್ನು ಸ್ವಚ್ಛಗೊಳಿಸಿದರು. ನಂತರ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಅಶೋಕ ಹಾಗೂ ಶಿವರಾಜಕುಮಾರ್ ಅವರನ್ನು ಕಾಲೇಜಿನ ಆವರಣ ಸುಂದರವಾಗಿ ಕಾಣುವಂತೆ ಮಾಡಲು ಸ್ವಯಂಪ್ರೇರಣೆಯಿಂದ ಯಂತ್ರೋಪಕರಣದ ಮುಖಾಂತರ ಸ್ವಚ್ಛಗೊಳಿಸಿದ್ದಕ್ಕಾಗಿ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಡಾ. ಸರಫರಾಜ್ ಅಹ್ಮದ್ ಅವರು ಸನ್ಮಾನ ಮಾಡಿದರು.
ಅಂತರಾಷ್ಟ್ರೀಯ ಕೈತೊಳೆಯುವ ದಿನ
ಕಾಲೇಜು ಸ್ವಚ್ಛತಾ ಕಾರ್ಯಕ್ರಮ ಮುಗಿದ ನಂತರ ಕಾಲೇಜಿನ ಮೈದಾನದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಶ್ರೀರಾಮನಗರದ ಸಹಯೋಗದಲ್ಲಿ ಅಂತರಾಷ್ಟ್ರೀಯ ಕೈತೊಳೆಯುವ ದಿನದ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಆಶಾ ಬೇಗಂ ಅವರು ಸೂಕ್ಷ್ಮಾಣುಜೀವಿ ನಮ್ಮ ಕೈ ಮೂಲಕ ದೇಹವನ್ನು ಸೇರಿ ಕಾಲರಾ, ಟೈಫಾಯ್ಡ್, ಹೆಪಿಟೈಟಸ್ ಬಿ, ರಕ್ತಹೀನತೆ, ಅಪೌಷ್ಟಿಕತೆಗೆ ಯಾವ ರೀತಿಯಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ದೈನಂದಿನ ಜೀವನದಲ್ಲಿ ಕೈ ತೊಳೆಯುವ ಆರು ಹಂತಗಳನ್ನು ಪ್ರಾತ್ಯಕ್ಷಿತೆ ಮೂಲಕ ವಿವರಿಸಿದರು. ನಂತರ ಅದೇ ಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಕೈ ತೊಳೆಯುವ ಮುಖಾಂತರ ಅಂತರಾಷ್ಟ್ರೀಯ ಕೈತೊಳೆಯುವ ದಿನವನ್ನು ಆಚರಿಸಲಾಯಿತು.
ಡಾ. ಎಪಿಜೆ ಅಬ್ದುಲ್ ಕಲಾಂ ರವರ ಜಯಂತಿ ಆಚರಣೆ
ನಂತರ ಕಾಲೇಜಿನ ಸಭಾಂಗಣದಲ್ಲಿ ಮಾಜಿ ರಾಷ್ಟ್ರಪತಿಗಳಾದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜಯಂತಿಯ ಅಂಗವಾಗಿ ಅಂತಾರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕರಿಗೂಳಿ ಅವರು ಮಾತನಾಡುತ್ತಾ ಕಲಾಂ ಜೀ ರವರ ಬಹುಮುಖ್ಯ ಹೇಳಿಕೆಯಾದ ‘ ಕನಸೆoದರೆ ನಿದ್ರೆಯ ಕಾಣುವುದು ಅಲ್ಲ ಬದಲಾಗಿ ನಿಮ್ಮನ್ನು ನಿದ್ರಿಸಲು ಬಿಡಲಾರದ್ದು ಕನಸು ಆದುದರಿಂದ ಕನಸುಗಳನ್ನು ಹಗಲು ಅಥವಾ ರಾತ್ರಿ ಕಾಣದೆ ದೊಡ್ಡ ಮಟ್ಟದಲ್ಲಿ ವಿಚಾರ ಮಾಡಿ ಅಂತಹ ಸಾಧನೆಗೋಸ್ಕರ ನಿಮ್ಮ ಸುಖನಿದ್ರೆ ತ್ಯಾಗ ಮಾಡಿ ಸಾಧಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಸಾಧಕರಾಗಿ ಹೊರಹೊಮ್ಮುವುದರಿಂದ ನಿಮ್ಮ ಬದುಕು ಹಸನಾಗುತ್ತದೆ ಹಾಗೂ ಕಾಲೇಜಿಗೆ ಗೌರವ ಬರುತ್ತದೆ. ನಿಮ್ಮ ಗುರಿಮುಟ್ಟಲು ಕಾಲೇಜಿನ ಸಕಲ ಸಂಪನ್ಮೂಲಗಳ ಸದ್ಬಳಕೆ ಮಾಡಕೊಳ್ಳಲು ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ, ಗ್ರಾಮದ ಶಿಕ್ಷಣ ಪ್ರೇಮಿಗಳು, ಸ್ಥಳೀಯ ರಾಜಕೀಯ ನಾಯಕರು ಹಾಗೂ ಕ್ಷೇತ್ರದ ಶಾಸಕರು ಸೇರಿದಂತೆ ಎಲ್ಲರನ್ನೂ ಬಳಸಿಕೊಳ್ಳಿ ಎಂದು ಪ್ರಾಂಶುಪಾಲರಾದ ಕರಿಗೂಳಿ ಅವರು ತಿಳಿಸಿದರು.
ಇದೇ ಸಮಯದಲ್ಲಿ ನಮ್ಮ ಕಾಲೇಜಿನ ಗ್ರಂಥಾಲಯ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೂತನ ವರ್ಷದ ಪುಸ್ತಕಗಳನ್ನು ವಿತರಿಸಲಾಯಿತು.
ತಂಬಾಕು ವಿರೋಧಿ ದಿನ ದ ಅಂಗವಾಗಿ ವ್ಯಸನಮುಕ್ತ ಯುವಜನತೆಯಿಂದ ಸದೃಢ ಸಮಾಜದ ನಿರ್ಮಾಣ ಕಾರ್ಯಕ್ರಮ
ವ್ಯಸನಗಳು ವಿದ್ಯಾರ್ಥಿ ಜೀವನವನ್ನಷ್ಟೇ ಅಲ್ಲ, ಇಡೀ ಬದುಕನ್ನೇ ನಾಶ ಮಾಡುತ್ತವೆ. ಹಾಗಾಗಿ ಎಲ್ಲರೂ ವ್ಯಸನಗಳಿಂದ ಮುಕ್ತರಾಗಲು ಪ್ರಯತ್ನಿಸಬೇಕು. ಮೊದಲು ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳು ವ್ಯಸನಗಳಿಂದ ಬಳಲುತ್ತಿದ್ದರೆ ಅವರಿಗೆ ಸೂಕ್ತ ರೀತಿಯಲ್ಲಿ ಅಗತ್ಯ ಸಹಾಯ ಮಾಡುವ ಮುಖಾಂತರ ವ್ಯಸನಗಳಿಂದ ಮುಕ್ತರಾಗುವಂತೆ ಮನಃಪರಿವರ್ತನೆ ಮಾಡಬೇಕು. ವಿದ್ಯಾರ್ಥಿಗಳೂ ಕೂಡ ವ್ಯಸನಗಳಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು. ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ ನಡೆಸಿ ಉತ್ತಮ ಪ್ರಬಂಧ ರಚಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಆಶಾ ಬೇಗಂ ಅವರು ತಂಬಾಕು ಸೇವನೆ, ಮದ್ಯ ಸೇವನೆ ಹಾಗೂ ಇನ್ನಿತರ ಮಾದಕ ವಸ್ತುಗಳ ಪರಿಚಯ ಗ್ರಾಮೀಣ ಭಾಗದಲ್ಲಿ ಕಡಿಮೆ ಎಂದು ಅಭಿಪ್ರಾಯಪಟ್ಟರು. ಜೊತೆಗೆ ಎಲ್ಲಾ ವಿದ್ಯಾರ್ಥಿಗಳು ವ್ಯಸನಗಳಿಂದ ದೂರ ಉಳಿಯಬೇಕು, ಇದರಿಂದ ಶೈಕ್ಷಣಿಕ ಸಾಧನೆ ಮಾಡಲು ಸಹಕಾರಿ ಎಂದು ತಿಳಿಸಿದರು. ವ್ಯಸನಗಳಿಂದಾಗುವ ಹಾನಿಗಳನ್ನು ತಿಳಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಕೇಂದ್ರ, ಶ್ರೀರಾಮನಗರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಹೆಚ್.ಎಂ. ಗುರುರಾಜ ಅವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸಾಂಸ್ಕೃತಿಕ ಸಂಚಾಲಕರಾದ ವೀರೇಶ ಅವರು ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸ್ವಾಗತ ಮಾಡಿ, ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದರು. ಕೊನೆಯಲ್ಲಿ ಸಹಾಯಕ ಪ್ರಾಧ್ಯಾಪಕರಾದ ಶಂಕ್ರಪ್ಪ ಎಂ. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ವಂದನೆಗಳನ್ನು ಅರ್ಪಿಸಿದರು.
ಸಸಿಸನೆಡುವ ಕಾರ್ಯಕ್ರಮ
ಕ್ಲೀನ್ ಅಂಡ್ ಗ್ರೀನ್ ಫೋರ್ಸ್ ಶ್ರೀರಾಮನಗರ ರವರ ಸಹಯೋಗದಲ್ಲಿ ನಮ್ಮ ಕಾಲೇಜಿನಲ್ಲಿ ಸಸಿನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಸಾರ್ಫರಾಜ್ ಅಹ್ಮದ್ ವಿರುಪಾಕ್ಷ ಕೆ, ಡಾ. ಶಶಿಕುಮಾರ ರವಿಕುಮಾರ ಮತ್ತು ಉಪನ್ಯಾಸಕರಾದ ವೆಂಕಟರಾಜು ಈಶಪ್ಪ ಮೇಟಿ, ವಿಜಯಕುಮಾರ,
ಡಾ. ಅರ್ಜುನ್, ನಂದಕುಮಾರ, ಪರಶುರಾಮ, ಪೀರಾವಲಿ, ಗ್ರಂಥಪಾಲಕರಾದ ಡಾ. ದೇವರಾಜ ಹಾಗೂ ಆಡಳಿತ ಸಿಬ್ಬಂದಿಯವರಾದ ಜಬೀನಾ ಬೇಗಂ, ವಿನಾಯಕ ಮತ್ತು ಸಹಾಯಕ ಸಿಬ್ಬಂದಿಯಾದ ಶಾಂತಿ, ಚಿನ್ನ ವರಪ್ರಸಾದ್, ಶರಣ ಹಾಜರಿದ್ದರು.
