ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್‌ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಸಮ್ಮೇಳನನ ಸರ್ವಾಧ್ಯಕ್ಷರಾಗಿ ರಂಗ ಕಲಾವಿದೆ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀಮತಿ ಉಮಾಶ್ರೀ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನವನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರು ಉದ್ಘಾಟಿಸಲಿದ್ದಾರೆ. ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್‌ಕುಮಾರ್, ನ್ಯಾಯಮೂರ್ತಿ ನಾಗಮೋಹನ ದಾಸ್‌ರವರು, ವೈಜ್ಞಾನಿಕ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹುಲಿಕಲ್ ನಟರಾಜ್ ರವರು, ನಿವೃತ್ತ ಐಎಎಸ್ ಅಧಿಕಾರಿಗಳಾದ ಸೋಮಶೇಖರ್ ಅವರು ಸಹ ಉಪಸ್ಥಿತರಿರಲಿದ್ದಾರೆ. ಸಮ್ಮೇಳನದಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರ, ಕರಕುಶಲ ಮೇಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಈ ರಾಜ್ಯಮಟ್ಟದ ನಾಲ್ಕನೇ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯಿಂದ ಜೀವಮಾನ ಸಾಧಕ ಪ್ರಶಸ್ತಿಗೆ ಆಯ್ಕೆಯಾದ ಸನ್ಮಾನ್ಯ ಶ್ರೀ ಮಹಾಂತಗೌಡ ಪಾಟೀಲ್, ರಾಜ್ಯಮಟ್ಟದ ಎಚ್.ಎನ್ ಪ್ರಶಸ್ತಿಗೆ ಆಯ್ಕೆಯಾದ ಎಸ್.ಎಂ. ಗವಿ ರವರನ್ನ ಹಾಗೂ ಈ ಬಾರಿ ವಿಶೇಷವಾಗಿ ರಾಜ್ಯ ಮಟ್ಟದಲ್ಲಿ ಮಹಿಳೆಯರಿಗಾಗಿ ನೀಡಲಾಗುತ್ತಿರುವ ಚೈತನ್ಯ ಶ್ರೀ ಪ್ರಶಸ್ತಿಗೆ ಆಯ್ಕೆಯಾದ ಸಂಗೀತ ಕಲ್ಲೇಶ್ ರವರನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದು.
ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಊಟ, ಉಪಹಾರ ವ್ಯವಸ್ಥೆಯನ್ನು ಮಾಡಲಾಗಿದೆ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಈ ಸಮ್ಮೇಳನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಸಹಕರಿಸುವಂತೆ ಸಿದ್ದಲಿಂಗೇಶ್ವರ ಪೂಲಬಾವಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು ೭೯೭೫೪೫೨೦೫೯ ವಿನಂತಿ.