ಹಾಸನದ ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರಧಾನ

ಹಾಸನದ ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರಧಾನ

ಹಾಸನ: ಅ: 26 ರಂದು ಅಕ್ಕಮಹಾದೇವಿ ಸಭಾಂಗಣ. ಕನ್ನಡ ಸಾಹಿತ್ಯ ಪರಿಷತ್. ಬೆಂಗಳೂರು ಜಾಗೃತಿ ಟ್ರಸ್ಟ್ ವತಿಯಿಂದ ಹಾಗೂ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ”ಯ ಸಹಯೋಗದಲ್ಲಿ ನಡೆಯುತ್ತಿರುವ “ನಗೆ ಹಬ್ಬ” ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ. ಸಾಮಾಜಿಕ ಚಿಂತಕಿ. ಸಾಹಿತಿ, ಪತ್ರಕರ್ತರಾದ ಹೆಚ್.ಎಸ್.‌ ಪ್ರತಿಮಾ ಹಾಸನ್‌ ಅವರಿಗೆ “ಕೆಂಪಮ್ಮ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಅವರು ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ’ ಸಂಸ್ಥಾಪಕ ಅಧ್ಯಕ್ಷರಾಗಿ, ಬಹುಮುಖ ಪ್ರತಿಭೆಯಾಗಿ, ಸದಾ ಕ್ರಿಯಾಶೀಲರಾಗಿ, ಜಿಲ್ಲೆ, ರಾಜ್ಯ, ಮಟ್ಟದಲ್ಲಿ ಹಲವಾರು ಸಂಘ ಸಂಸ್ಥೆಯಲ್ಲಿ ಪದಾಧಿಕಾರವನ್ನು ಪಡೆದು ಕಾರ್ಯನಿರ್ವಹಿಸುತ್ತಾ, ನೂರಾರು ಪ್ರಶಸ್ತಿಗಳನ್ನು ಪಡೆದಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದು ಗುರುತಿಸಿಕೊಂಡಿರುವ ಮಹಿಳಾ ಸಾಧಕಿಯಾಗಿ, ಮಹಿಳಾ ಹೋರಾಟಗಾರ್ತಿಯಾಗಿ, ಕನ್ನಡ ಪರ ಹೋರಾಟಗಾರ್ತಿಯಾಗಿ, ಸಮಾಜ ಸೇವಕಿಯಾಗಿ, ಸಂಘಟಕಿಯಾಗಿ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಹಿತಿಕವಾಗಿ ಸೇವೆ ಸಲ್ಲಿಸಿದ್ದು ಹಾಗೂ ಹಲವಾರು ಪ್ರಕಾರಗಳಲ್ಲಿ 12 ಕ್ಕೂ ಹೆಚ್ಚು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಹಲವು ಕೃತಿ ಬಿಡುಗಡೆಗೆ ಸಿದ್ಧವಾಗುತ್ತಿದ್ದು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಹಾಗೂ ಅಂಕಣಗಾರ್ತಿಯಾಗಿ, ಹಲವಾರು ಪ್ರಕಾರಗಳಲ್ಲಿ ಪತ್ರಿಕೆಗಳಿಗೆ ಬರೆಯುತ್ತಿರುವ ಹೆಚ್. ಎಸ್. ಪ್ರತಿಮಾ ಹಾಸನ್ ರವರನ್ನು ಸಾಹಿತ್ಯ ಕ್ಷೇತ್ರಕ್ಕೆ ಆಯ್ಕೆ ಮಾಡಿ ಪ್ರತಿಷ್ಠಿತವಾದ ಈ ‘ಕೆಂಪಮ್ಮ ಪ್ರಶಸ್ತಿ ‘ ನೀಡಿ ಸನ್ಮಾನಿಸಲಾಯಿತು.

ಎಂ.ಎಸ್. ನರಸಿಂಹಮೂರ್ತಿರವರ “ಬಂಟಿ ಹೇಳಿದ ಕತೆಗಳು” (ಮಕ್ಕಳ ಇವತ್ತು ಹಾಸ್ಯಮಯ ಕತೆಗಳು) ಕೃತಿ ಬಿಡುಗಡೆ ಹಾಗೂ ಅವರ 76 ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಹಾಗೂ ಕಾರ್ಯಕ್ರಮದಲ್ಲಿ ಅಧ್ಯಕ್ಷರು ನಾಗೇಶ್, ವೈ.ವಿ. ಗುಂಡೂರಾವ್, ಹೆಚ್ ಡುಂಡಿರಾಜ್, ಅಪ್ಪಣ್ಣ ಮೇಟಿಗೌಡ, ಹೆಚ್.ಎಂ. ರಘುಕೋಟೆ ಇನ್ನೂ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.https://aratt.ai/@vishwaroopa_news_blog

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading