ಗಂಗಾವತಿ: ಲ
ಯನ್ಸ್ ಕ್ಲಬ್ ನೇತೃತ್ವದಲ್ಲಿ ಮಂಗಳವಾರದಂದು ೧೩ ವರ್ಷದ ಒಳಗಿನ ಮಕ್ಕಳಿಗಾಗಿ ಪೀಸ್ ಪೋಸ್ಟರ್ ಕಾಂಪಿಟೇಶನ್ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಜಜಾ ಹುಸ್ನಾ ಹಾಗೂ ಕುಶ್ ರಾಜ್ ಪುರೋಹಿತ್ ಪ್ರಥಮ ಸ್ಥಾನ ಪಡೆದುಕೊಂಡರು. ಚಿತ್ರಕಲೆಯಲ್ಲಿ ಪಾಲ್ಗೊಂಡ ಮುದ್ದು ಮಕ್ಕಳು ಟುಗೆದರ್ ವನ್ ವಿಷಯ ಕುರಿತು ತಮ್ಮದೇ ಆದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ ಬಾಲ್ಯದಲ್ಲಿ ಮಕ್ಕಳಿಗೆ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಾಕಷ್ಟು ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಸ್ಪರ್ಧೆಗೆ ಸಹಕರಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿಗಳಾದ ಜಂಬಣ್ಣ ಐಲಿ, ಖಜಾಂಚಿಗಳಾದ ಶಿವಪ್ಪ ಗಾಳಿ ಹಾಗೂ ಸ್ಪರ್ಧೆಯ ನಿರ್ಣಾಯಕರಾಗಿ ಖ್ಯಾತ ಚಿತ್ರ ಕಲಾವಿದ ಹಾಗೂ ನಿವೃತ್ತ ಶಿಕ್ಷಕ ರಾಘವೇಂದ್ರ ಪುರೋಹಿತ್, ಹಿರಿಯ ವೈದ್ಯರಾದ ಡಾ|| ಜಿ. ಚಂದ್ರಪ್ಪ,. ಡಾ|| ಪಂಪಾಪತಿ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.https://aratt.ai/@vishwaroopa_news_blog
