ಗಂಗಾವತಿ: ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ದಕ ಸಂಘದ ಗುಂಜಹಳ್ಳಿ ಹಿರೇನಾಗಪ್ಪ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನವೆಂಬರ್-೨೨ ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ AI ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ (ರಿ) ದ ಶಾಶ್ವತ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕೊಟ್ಟೂರು ಮಹಾಸ್ವಾಮಿಗಳು ಉದ್ಘಾಟಿಸಿದರು. ಸ್ವಾಮೀಜಿಗಳು ವಿದ್ಯಾರ್ಥಿಗಳ ನೈತಿಕತೆ, ಶಿಸ್ತಿನ ಮಹತ್ವ ಮತ್ತು ಗುಣಮಟ್ಟಾಧಾರಿತ ಶಿಕ್ಷಣದ ಅಗತ್ಯತೆಯ ಬಗ್ಗೆ ತಮ್ಮ ಆಶಯ ಭರಿತ ಆಶೀರ್ವಚನವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶರಣಬಸವಯ್ಯ ವಹಿಸಿ, ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ, AI ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿಗಳಾದ ಶರಣೆಗೌಡ ಜಿ. ಮಾಲಿಪಾಟೀಲ್ ಭಾಗವಹಿಸಿ ವಿದ್ಯಾರ್ಥಿಗಳು ಹೊಸ ಯುಗದಲ್ಲಿ ಸ್ಪರ್ಧಾತ್ಮಕ ಕೌಶಲ್ಯಗಳನ್ನು ಹೊಂದಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗಂಗಾವತಿಯ ಎಂ.ಡಿ. ನಾಸಿರುದ್ದೀನ್ ಭಾಗವಹಿಸಿ, ಶಿಕ್ಷಣದಲ್ಲಿ ಗುಣಮಟ್ಟದ ಭೂಮಿಕೆ, ಹೊಸ ಶೈಕ್ಷಣಿಕ ಅವಶ್ಯಕತೆಗಳು, ವಾಣಿಜ್ಯದಲ್ಲಿ ಎ.ಐ ತಂತ್ರಜ್ಞಾನದ ಕುರಿತು ಮತ್ತು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಕುರಿತು ಉಪಯುಕ್ತ ಹಾಗೂ ಪ್ರೇರಣದಾಯಕ ಉಪನ್ಯಾಸವನ್ನು ನೀಡಿದರು.
ಐ.ಕ್ಯೂ.ಎ.ಸಿ ಸಂಯೋಜಕರು ಹಾಗೂ ವಾಣಿಜ್ಯಶಾಸ್ತçದ ಉಪನ್ಯಾಸಕರಾದ ದಾದಾ ಕಲಂದರ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದರು.
ಇದೇ ಸಂದರ್ಭದಲ್ಲಿ ಎಂಕಾಂ ವಿಭಾಗದ ಸಂಯೋಜಕರು ಹಾಗೂ ಹಿರಿಯ ಉಪನ್ಯಾಸಕರಾದ ಸೋಮನಗೌಡ ಎಸ್.ಕೆ. ಅವರು ತಮ್ಮ ಮಾತಿನಲ್ಲಿ ವಿಭಾಗದ ಚಟುವಟಿಕೆಗಳ ಬಗ್ಗೆ ವಿವರಿಸಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಯಲಕ್ಷ್ಮೀ ಅವರು ಕಾರ್ಯಕ್ರಮದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ವರ್ಗ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. https://aratt.ai/@vishwaroopa_news_blog
