ಗಂಗಾ
ವತಿ: ನಗರದ ಶ್ರೀಕೊಟ್ಟೂರೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯು ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ವೈಷ್ಣವಿ ಇವರು ಡಿಸೆಂಬರ್-೨ ರಂದು ಬಸವಕಲ್ಯಾಣದಲ್ಲಿ ನಡೆದ ವಿಭಾಗೀಯ ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈ ವಿದ್ಯಾರ್ಥಿನಿಗೆ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. https://aratt.ai/@vishwaroopa_news_blog
