ಗಂಗಾವತಿ: ಡಿಸೆಂಬರ್-೨೩ ಮಂಗಳವಾರ ಆರೋನ್ ಮಿರಜ್‌ಕರ್ ಹಾಗೂ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ “ಮಕ್ಕಳ ಕ್ರಿಸ್‌ಮಸ್”ನ್ನು ಸಿಹಿ ಹಂಚುವುದರ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು.
ಶಾಲೆಯ ಗೋಡೆಗಳನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಿ, ಮಕ್ಕಳೇ ತಯಾರಿಸಿದ ನಾನಾಬಗೆಯ ಚಿತ್ರಗಳಿಂದ ಗೋಡೆಗಳನ್ನು ಶೃಂಗರಿಸಿ, ಅಪರಾಹ್ನ ೨ ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ‘ಶ್ರೀಮತಿ ಚಿನ್ನಮ್ಮ ಮಿರಜ್‌ಕರ್’ ವಹಿಸಿದ್ದರು.
ಉದ್ಘಾಟನೆಯನ್ನು ಕೇಕ್ ಕತ್ತರಿಸುವುದರ ಮೂಲಕ ಇಸಿಐ ಕರ್ನಾಟಕ ಚರ್ಚ್‌ನ ರೈ. ರೆ. ಬಿಷಫ್ ರವಿ ಕುಮಾರ್
ಅಂದ್ಲಿ ಅವರು ನೆರವೇರಿಸಿ, “ಮಕ್ಕಳ ಕ್ರಿಸ್‌ಮಸ್ ಹಬ್ಬದ ವಿಶೇಷತೆ ಮತ್ತು ಆಚರಣೆಯ ಮಹತ್ವವನ್ನು” ತಮ್ಮ ಉದ್ಘಾಟಕರ ಭಾಷಣದಲ್ಲಿ ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರು.
ಏಸುಕ್ರಿಸ್ತನ ಜೀವನ, ಸಾಧನೆಗಳನ್ನು ಕುರಿತು ಹಾಗೂ ಹೊಸ ವರ್ಷದ ಆಚರಣೆಯ ವಿಶೇಷತೆಯ ಬಗ್ಗೆ ಶಾಲೆಯ ಕಾರ್ಯದರ್ಶಿಗಳಾದ ರುಬೇನ್ ಮಿರಜ್‌ಕರ್ ಅವರು ತಿಳಿಸಿದರು.
ರೆವ. ಶ್ರೀ ಯೇಸುದಾಸ್ ಮತ್ತು ರೆವ. ಶ್ರೀ ಯೋಹನ್ ಬಾಬು ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಯೇಸುವಿನ ಪ್ರಾರ್ಥನೆ ಮತ್ತು ದೇವರ ವಾಕ್ಯಗಳನ್ನು ತಿಳಿಸಿದರು.
ಶಾಲೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್, ಆಡಳಿತಾಧಿಕಾರಿಗಳಾದ ಶ್ರೀ ಚಂದ್ರಕಾಂತ್‌ರಾವ್, ಆರೋನ್ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮಂಜುನಾಥ ನಾಯಕ ಹಾಗೂ ನಿವೇದಿತಾ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇಖಾ ಠಾಕೂರ್ ಮತ್ತು ಶಾಲೆಯ ಆಡಳಿತ ಮಂಡಳಿಯ ಸದಸ್ಯೆ ಕು. ಏಂಜಲಿನಾ ಮಿರಜ್‌ಕರ್ ವೇದಿಕೆಯಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಂತಾಕ್ಲಾಸ್ ಕೆಂಪು ಮತ್ತು ಬಿಳಿ ಬಣ್ಣದ ಸಮವಸ್ತ್ರಗಳನ್ನು ಧರಿಸಿ ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಮನಮುಟ್ಟುವಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಉಭಯ ಶಾಲೆಗಳ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. https://aratt.ai/@vishwaroopa_news_blog
