ಸೆಪ್ಟೆಂಬರ್ 28, 2026

ಗಂಗಾವತಿ: ಸಮೀಪದ ಶ್ರೀರಾಮನಗರದ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರವಿವಾರ ದಿನದಂದು ವಿಶ್ವ ಮಾನವ ವೀರ ಸನ್ಯಾಸಿ ಶ್ರೀ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಪ್ರಯುಕ್ತ ಹಾಗೂ ಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ಪಾಲಕರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಸಂಸ್ಥೆಯ ಕಾರ್ಯದರ್ಶಿ ಜಗನ್ನಾಥ್ ಆಲಂಪಲ್ಲಿ ಮಾತನಾಡಿ ಯುವಶಕ್ತಿ ವಿದ್ಯುತ್ ಶಕ್ತಿಯಂತೆ ಸಾಮರ್ಥ್ಯವನ್ನು ಹೊಂದಿದ್ದು ದೇಶದ ಸರ್ವತೋಮುಖ ಅಭಿವೃದ್ಧಿಗೆ ಯುವಕರು ಕಂಕಣಬದ್ಧರಾಗಬೇಕಿದೆ. ಈ ಹಿನ್ನೆಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಪಾಲಕರಿಗಾಗಿ ಪುರುಷರು ಹಾಗೂ ಮಹಿಳಾ ಪಾಲಕರಿಗೆ ವಿಶೇಷ ಕ್ರೀಡೆ ಚಟುವಟಿಕೆಗಳನ್ನು ನಡೆಸುವುದರ ಮೂಲಕ ತಮ್ಮ ಮಕ್ಕಳ ಗುಣಮಟ್ಟದ ಶಿಕ್ಷಣದ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಸೋಮವಾರದಂದು ಶಾಲಾ ವಾರ್ಷಿಕೋತ್ಸವ ಉದ್ಘಾಟನೆ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗಂಗಾವತಿ ಲಿಟಲ್ ಹಾರ್ಟ್ ಶಾಲೆಯ ಮುಖ್ಯೋಪಾಧ್ಯಾಯನಿ ಪ್ರಿಯಕುಮಾರಿ, ಪ್ರಭಾಕರ್ ಚಿನ್ನುಪಾಟಿ, ಮುಖ್ಯಗುರು ಶಾರುಣ್ ಕುಮಾರಿ ಸೇರಿದಂತೆ ಶಿಕ್ಷಕರು ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  https://aratt.ai/@vishwaroopa_news_blog

Leave a Reply

Optimized by Optimole

Discover more from VISHWAROOPA NEWS BLOG

Subscribe now to keep reading and get access to the full archive.

Continue reading