ಸೆಪ್ಟೆಂಬರ್ 28, 2026
ಗಂಗಾವತಿ: ದಲಿತ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಗಂಗಾವತಿ ವತಿಯಿಂದ ಮಾರ್ಚ್‌-8 ರಂದು ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಶೈಲಜಾ ಹಿರೇಮಠರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಭಾರತೀಯ ವೈದ್ಯಕೀಯ ಭವನ (ಐ.ಎಂ.ಎ) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ತಾಲೂಕ ಘಟಕ ಅಧ್ಯಕ್ಷರಾದ ಛತ್ರಪ್ಪ ತಂಬೂರಿ ಹಾಗೂ ಕಾರ್ಯದರ್ಶಿಯಾದ ಮೈಲಾರಪ್ಪ ಬೂದಿಹಾಳ ಅವರು ಪ್ರಕಟಣೆಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮ ಉದ್ಘಾಟನೆ ಯನ್ನು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಮಾಡಲಿದ್ದು, ಅಧ್ಯಕ್ಷತೆಯನ್ನು ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷರಾದ ಡಾ. ಲಿಂಗಣ್ಣ ಜಂಗಮರಹಳ್ಳಿ ವಹಿಸಲಿದ್ದಾರೆ. ಸಾವಿತ್ರಿ ಬಾಪುಲೆರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾದ ರಮೇಶ ಗಬ್ಬೂರು ಹಾಗೂ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ. ನಿಂಗಜ್ಜ ಮಾಡಲಿದ್ದಾರೆ. ಸಂವಿಧಾನ ಪೀಠಿಕೆಯನ್ನು ಶಿಕ್ಷಕಿಯಾದ ಶ್ರೀಮತಿ ಶಾರದಾ ಸುಂಕಪ್ಪ ಓದಲಿದ್ದಾರೆ.
ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 18 ಜನರಿಗೆ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯನ್ನು ಕೊಪ್ಪಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರಗೌಡ ಪಾಟೀಲ್‌ ನೀಡಲಿದ್ದಾರೆ. ಶ್ರೀರಾಮನಗರದ ಇಂದಿರಾಗಾಂಧಿ ವಸತಿ ಶಾಲೆಯ ಸಾಧನೆಗೈದ ಇಬ್ಬರು ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಈ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ವೈದ್ಯರು, ಸಾಹಿತಿಗಳು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅನೇಕ ಗಣ್ಯರು, ವೈದ್ಯರು, ಸಾಹಿತಿಗಳು ಹಾಗೂ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಕುಮಾರಿ ರಂಜನಿ ಆರತಿ, ಬಿದಾನಂದ ಬರಗೂರು ಹಾಗೂ ಸಂಗಡಿಗರಿಂದ ಅರಿವಿನ ಹಾಡುಗಳು ಮೂಡಿಬರಲಿವೆ. https://aratt.ai/@vishwaroopa_news_blog

1 thought on “ದಲಿತ ಸಾಹಿತ್ಯ ಪರಿಷತ್‌ನಿಂದ ಸಾವಿತ್ರಿ ಬಾಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಿಶೇಷ ಉಪನ್ಯಾಸ.”

Leave a Reply

Optimized by Optimole

Discover more from VISHWAROOPA NEWS BLOG

Subscribe now to keep reading and get access to the full archive.

Continue reading